ಛತ್ತೀಸ್‌ಗಡ ಮೂಲದ ಐಎಎಸ್ ಅಧಿಕಾರಿ ಬಾಬುಲಾಲ್ ಅಗರವಾಲ್ ಅವರಿಗೆ ಸೇರಿದ ₹27.86 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣ, ಆದಾಯ ಮೀರಿದ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿ ಅಗರವಾಲ್ ಮತ್ತು ಕುಟುಂಬದ ಸದಸ್ಯರ ವಿರುದ್ಧ ಇ.ಡಿ ತನಿಖೆ ನಡೆಸುತ್ತಿದೆ.
ಜಪ್ತಿ ಮಾಡಿದ ಆಸ್ತಿಯಲ್ಲಿ, ಬ್ಯಾಂಕ್‌ನ ಅವರ ಖಾತೆಯಲ್ಲಿದ್ದ ನಗದು ಸೇರಿದಂತೆ ಸ್ಥಿರಾಸ್ತಿ, ಚರಾಸ್ತಿ ಒಳಗೊಂಡಿದೆ. ಇವುಗಳ ಒಟ್ಟು ಮೌಲ್ಯದ ₹27.86 ಕೋಟಿ ಎಂದು ಇ.ಡಿ ಹೇಳಿಕೆ ತಿಳಿಸಿದೆ.
1988ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅಗರವಾಲ್ ಅವರನ್ನು ನವೆಂಬರ್ 9ರಂದು ರಾಯಪುರದ ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಡಿ. 5ರವರೆಗೂ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಫಿಸಲಾಗಿದೆ. ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬಂಧನದ ನಂತರ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ