2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ.
ಈ ವಿಷಯವನ್ನು ಗದಗನಲ್ಲಿ ಸುದ್ದಿಗಾರರಿಗೆ ತಿಳಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೆವೆ ,ಎಂದು ಚುನಾವಣೆಗೂ ಮುನ್ನ ಬಂಪರ್ ಗಿಪ್ಟ್ ಆಫರ್ ನೀಡುವ ಮೂಲಕ ಮಹಿಳೆಯರ ಮತಕ್ಕೆ ಶ್ರೀರಾಮುಲು ಕಣ್ಣು ಹಾಕಿರುವ ಸುಳಿವು ನೀಡಿದರು.
ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು. ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ ಬಳಕೆ ಮಾಡುವದು ಏನೂ ಇಲ್ಲ. ಎಲ್ಲವೂ ಭವಿಷ್ಯದ ನಿಧಿ ಸಲುವಾಗಿ ಕೊಟ್ಟಿದ್ದು ಎಂದರು
ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ವಿಚಾರಕ್ಕೆ ವ್ಯಂಗ್ಯವಾಡಿ, ಕಾಂಗ್ರೆಸ್ ಹಿಂದುಳಿದ ಜಾತಿಗಳ ಆಧಾರದ ಮೇಲೆ ರಾಜಕಾರಣ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಪಂಚರಾಜ್ಯ ಚುನಾವಣೆ ನೋಡಿದರೆ ಗೊತ್ತಾಗುತ್ತೆ, ಕಾಂಗ್ರೆಸ್ ದೂಳಿಪಟ ಆಗಿದೆ. ಕಾಂಗ್ರೆಸ್ ಪಕ್ಷ ಈಗ ಪಾರ್ಟ್ ಟೈಮ್ ಪಾರ್ಟಿ ಆಗಿ ಉಳಿದಿದೆ ಎಂದು ಲೇವಡಿ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು