ಜೆಡಿಎಸ್ ಗೆ ಬಹುಮತ ಬರದಿದ್ದರೆ ಪಕ್ಷವನ್ನೇ ವಿಸರ್ಜಿಸುವೆ – ಎಚ್ ಡಿಕೆ

Team Newsnap
1 Min Read

ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳಕ್ಕೆ , ಬಹುಮತ ಸಿಗುವ ವಿಶ್ವಾಸವಿದೆ . ಒಂದು ವೇಳೆ ಬಹುಮತ ಬರದೇ ಹೋದರೆ ಪಕ್ಷವನ್ನೇ ವಿಸರ್ಜಿಸುವೆ ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಘೋಷಿಸಿದರು.

ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುವುದಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಜ್ಯದ ಜನತೆ ಜೆಡಿಎಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುವ ವಿಶ್ವಾಸವನ್ನು ನಾನು ಹೊಂದಿದ್ದೇನೆ, ಒಂದು ವೇಳೆ ಸರ್ಕಾರ ರಚಿಸಲು ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share This Article
Leave a comment