February 23, 2026

Newsnap Kannada

The World at your finger tips!

YADIYURAPPA1

ಅನಿವಾರ್ಯವಾದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ – ಸಿಎಂ ಯಡಿಯೂರಪ್ಪ

Spread the love

ಕೊರೋನಾ ವೈರಸ್ ತಡೆಗಟ್ಟಲು ಅನಿವಾರ್ಯವಾದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಬೀದರ್ ನಲ್ಲಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟಲು ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ ಹೇಳಿದರು.

ಲ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು.ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಆದರೂ ಈ ಬಗ್ಗೆ ಚಿಂತನೆಯಂತೂ ನಡೆದಿದೆ ಎಂದು ಹೇಳಿದರು.

error: Content is protected !!