ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಸ್ಪರ್ಧೆಗೆ ಸಿದ್ಧ ಎಂದು ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು
ಮಂಡ್ಯದ ಪಾಂಡವಪುರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್, ಗೆಲ್ಲೋದು ಸೋಲುವುದು ರಾಜಕಾರಣದಲ್ಲಿ ಸಹಜ. ಸೋತಾಗಲೇ ನಮಗೆ ಮುಂದಿನ ದಿನಗಳಲ್ಲಿ ನಮ್ಮ ನಡೆ ಹೇಗಿರಬೇಕೆಂಬ ಬಗ್ಗೆ ಆತ್ಮಾವಲೋಕ ಆಗುತ್ತೆ. ಅದಕ್ಕೆ ನಮಗೆ ಒಳ್ಳೆಯ ಅವಕಾಶ ಸಿಕ್ಕಿದೆ ಎಂದರು
ಕಳೆದ ಲೋಕಸಭೆಯಲ್ಲಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್, ಬಿಜೆಪಿ, ರೈತ ಸಂಘಟನೆ ಎಲ್ಲರೂ ಸೇರಿ ಮುಗಿಸಿದ್ದನ್ನು ನೋಡಿದ್ದೇವೆ. ಅದರ ಬಗ್ಗೆ ಪದೇ ಪದೇ ಚರ್ಚೆ ಮಾಡುವಂತಹದ್ದು ಸೂಕ್ತವಲ್ಲ ಎಂದರು
ಪಕ್ಷ ಒಪ್ಪಿದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಸಿದ್ಧವಾಗಿದ್ದೀನಿ ಎಂದು ಸ್ಪಷ್ಟಪಡಿಸಿದರು.
ಕೆ.ಆರ್ ಪೇಟೆ ಉಪ ಚುನಾವಣೆಯಾದ ನಂತರ ನಾವು ಪರಿಷತ್ ಚುನಾವಣೆ ಎದುರಿಸುತ್ತಿದ್ದೇವೆ. ನಾನು ಯಾವಾಗಲೂ ಕಾರ್ಯಕರ್ತರ ಜೊತೆ ಇರ್ತಿನಿ. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡರನ್ನು ಒತ್ತಾಯ ಪೂರಕವಾಗಿ ನಿಲ್ಲಿಸಿಲ್ಲ. ಅವರು ನಾನು ಈಗಾಗಲೇ ಒಮ್ಮೆ ಎಮ್ ಎಲ್ ಸಿ ಆಗಿದ್ದೀನಿ. ಬೇರೊಬ್ಬರಿಗೆ ಅವಕಾಶ ನೀಡಿ ಎಂದಿದ್ದರು. ಚುನಾವಣೆ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪ ಸಹಜ. ಅದಕ್ಕೆಲ್ಲಾ ಡಿಸೆಂಬರ್ 10 ರಂದು ಜನ ಉತ್ತರ ನೀಡ್ತಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ