ಮಗ ತೆರಿಗೆ ಕಟ್ಟಿದರೂ ಯಜಮಾನಿಯೇ ‘ಗೃಹಲಕ್ಷ್ಮಿ’ ಫಲಾನುಭವಿ

Team Newsnap
1 Min Read
Application submission for Grilahakshmi Yojana starts from June 19 – Minister Lakshmi ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಮಗ ತೆರಿಗೆ ಪಾವತಿಸುತ್ತಿದ್ದರೂ ತಾಯಿಯೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗುತ್ತಾಳೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಗಂಡ, ಮಗ ತೆರಿಗೆ ಪಾವತಿಸುತ್ತಿದ್ದರೂ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂದರು.

ಈ ಹೇಳಿಕೆ ಸಾರ್ವಜನಿಕವಾಗಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಹೇಳಿಕೆಯನ್ನು ಸರಿಪಡಿಸಿಕೊಂಡಿದ್ದಾರೆ.

ಇದನ್ನು ಓದಿ –ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ

ಗಂಡ ಟ್ಯಾಕ್ಸ್ ಕಟ್ಟಿದ್ರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಆದರೆ ಮಗ ಟ್ಯಾಕ್ಸ್ ಪಾವತಿಸುತ್ತಿದ್ದರೂ, ಜಿಎಸ್‍ಟಿ ಪಾವತಿ ಮಾಡುತ್ತಿದ್ದರೂ ತಾಯಿಗೆ ಮಾಸಿಕ 2000 ರೂಪಾಯಿ ಕೊಡುತ್ತೇವೆ ಎಂದು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡುವ ಮೂಲಕ ಅನಗತ್ಯ ಗೊಂದಲಕ್ಕೆ ತೆರೆ ಎಳೆಯಲು ನೋಡಿದ್ದಾರೆ.

Share This Article
Leave a comment