ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದರು, ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾರಾಯಣಗೌಡ ,ಸುಮಲತಾ ಪಕ್ಷಕ್ಕೆ ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ.
ಸುಮಲತಾ ಅವರು ಪಕ್ಷಕ್ಕೆ ಬರುವುದಾಗಿ ತಿಳಿಸಿದ್ದಾರೆ.ಕೆಲವೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಈಗ ಬರುವುದಕ್ಕೆ ಆಗುತ್ತಿಲ್ಲ ಅಂತ ಹೇಳಿದ್ದಾರೆ. ನೋಡೋಣ ಮುಂದೆ ಏನು ನಿರ್ಧಾರ ಕೈಗೊಳ್ಳುತ್ತಾರೆ ಎಂದ ತಿಳಿಸಿದರು.
ಮಂಡ್ಯ ಭಾಗದಲ್ಲಿ ಮತ್ತಷ್ಟು ಜನ ಬಿಜೆಪಿಗೆ ಸೇರ್ಪಡೆಯಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು 17 ಜನ ಈಗ ಬಂದಿದ್ದೇವೆ. ಅದು ಮುಂದೆ ಪ್ಲಸ್ ಪ್ಲಸ್ ಆಗುತ್ತದೆ. ಯಾರು, ಯಾರು ಬರುತ್ತಾರೆ ಅಂತ ಈಗ ಹೇಳುವುದಿಲ್ಲ. ಈಗ ಹೇಳಿದರೆ ಅವರನ್ನು ಕೂಡಿ ಹಾಕುತ್ತಾರೆ. ಈಗಾಗಲೇ 4-5 ಜನರ ಹೆಸರು ನೀವೇ ಹಾಕಿದ್ದೀರಾ. ಇನ್ನು ಯಾರು ಯಾರು ಬರ್ತಾರೆ ಅಂತ ಮುಂದೆ ಗೊತ್ತಾಗುತ್ತದೆ ಎಂದರು.
ಇದನ್ನು ಓದಿ : ರಾಜ್ಯದ 47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರು ಬಿಡುಗಡೆ
ಮಂಡ್ಯದಲ್ಲಿ ಕೇಂದ್ರ ನಾಯಕರ ಸಮಾವೇಶ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಜಿಲ್ಲೆಯಲ್ಲಿ ಅನೇಕರು ಬಿಜೆಪಿ ಸೇರ್ಪಡೆಗೆ ಆಸಕ್ತಿ ತೋರಿಸಿದ್ದಾರೆ. ಆದರೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನ ಮಾಡಿ ಸೇರಿಸಿಕೊಳ್ಳುತ್ತೇವೆ. ಸದ್ಯ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಮಾವೇಶ ಈಗ ಮಾಡುವುದಿಲ್ಲ ಅಂತ ತಿಳಿಸಿದರು. ಇನ್ನು ಮಂಡ್ಯದಲ್ಲಿ ಈ ಬಾರಿ ನಾವು 4 ಸ್ಥಾನ ಗೆಲ್ಲುತ್ತೇವೆ. ಹೇಗೆ ಗೆಲ್ಲುತ್ತೇವೆ ಅಂತ ನಾನು ಹೇಳುವುದಿಲ್ಲ. ಆದರೆ 4 ಸ್ಥಾನ ಬಿಜೆಪಿ ಗೆಲ್ಲುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ