ಬೆಂಗಳೂರು: ಉಚಿತ ವಿದ್ಯುತ್ ಯೋಜನೆ ಜಾರಿ ಆಗುವವರೆಗೆ ಬಿಲ್ ಪಾವತಿ ಮಾಡದೇ ಇದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಎಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 200 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿತ್ತು.
ಹೊಸ ಸರ್ಕಾರದ ಭರವಸೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಬಿಲ್ ಪಾವತಿಸಲು ಜನರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಬಿಲ್ ಕೇಳಲು ಹೋದ ಸಿಬ್ಬಂದಿ ಮೇಲೆ ಕೆಲವೆಡೆ ಹಲ್ಲೆ ನಡೆದಿದೆ.
ರಾಜ್ಯ ಸರಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ ಎಂದು ಹಲವರು ಬಿಲ್ ಪಾವತಿಸಲು ನಿರಾಕರಿಸುತ್ತಿದ್ದಾರೆ. ಮೊದಲ 200 ಯೂನಿಟ್‍ಗಳಿಗೆ ಬಿಲ್ ಮೊತ್ತವನ್ನು ಕಡಿತಗೊಳಿಸಬೇಕೆಂದು ಕೇಳುತ್ತಿದ್ದಾರೆ. ಸರ್ಕಾರದ ಆದೇಶ ಇನ್ನೂ ಜಾರಿಯಾಗಿಲ್ಲ. ಟಿ.ನರಸೀಪುರ ಬಳಿ ಖಾಸಗಿ ಬಸ್- ಇನ್ನೊವಾ ಕಾರಿನ ನಡುವೆ ಭೀಕರ ಅಪಘಾತ, 10 ಮಂದಿ ಸಾವು
ಹಾಗಾಗಿ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ. ಇಲ್ಲದಿದ್ದರೆ ನಿಯಮದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಬಿಲ್ ಪಾವತಿಸಲು ನಿರಾಕರಿಸುವವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ನಾವು ಹೇಳುತ್ತೇವೆ ಎಂದು ಸೆಸ್ಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ