ಚಾಮರಾಜನಗರ ಜಿಲ್ಲೆಯ ಕೆಲವು ಕಡೆ ಕೊರೊನಾ ವ್ಯಾಕ್ಸಿನೇಷನ್ ಹಾಕಿಸಿ ಕೊಳ್ಳಲು ಜನ ಮೀನಾ ಮೇಷ ಎಣಿಸುತ್ತಿದ್ದರೆ, ಮತ್ತೊಂದು ಕಡೆ ವ್ಯಾಕ್ಸಿನೇಷನ್
ವೇಗ ಹೆಚ್ಚಿಸಿ ಸರ್ಕಾರದ ಗುರಿ ಮುಟ್ಟುವ ಸಲುವಾಗಿ ಚಾಮರಾಜನಗರ ಜಿಲ್ಲಾಡಳಿತ ಜನರಿಗೆ ಚುರುಕು ಮುಟ್ಟಿಸುವ ನಿಯಮಗಳನ್ನು ಜಾರಿ ತಂದಿದೆ.
ಇದೊಂದು ರೀತಿಯಲ್ಲಿ ವಿಭಿನ್ನ ಅಭಿಯಾನ. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಸೂಚನೆ ನೀಡಿದ್ದಾರೆ.
ಅಷ್ಟೇ ಅಲ್ಲದೆ ವ್ಯಾಕ್ಷಿನ್ ಪ್ರಮಾಣಪತ್ರ ಇದ್ದರೆ ಮಾತ್ರ ಮಾಶಾಸನ ಪಾವತಿ ಮಾಡುವಂತೆ ಎಲ್ಲ ಬ್ಯಾಂಕ್ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಲಸಿಕೆ ಹಾಕಿಸಿಕೊಳ್ಳಲು ಕೆಲವು ಜನರು ಉದಾಸೀನ ತೋರಿದ ಹಿನ್ನೆಲೆ ಜನರಿಗೆ ಕೊರೊನಾ ಸೋಂಕಿನ ಬಗ್ಗೆ ಗಂಭೀರತೆ ಮೂಡಿಸಲು, ಜನರ ಆರೋಗ್ಯ ಸುರಕ್ಷತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವುದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ
ಅಭಿಪ್ರಾಯ.
ಚಾಮರಾಜನಗರ ಜಿಲ್ಲೆಯಲ್ಲಿ 2 ಲಕ್ಷ 90 ಸಾವಿರ ಬಿಪಿಎಲ್, ಅಂತ್ಯೋದಯ ಪಡಿತರದಾರರು ಇದ್ದಾರೆ. ಹಾಗೂ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ 2 ಲಕ್ಷ 20 ಸಾವಿರ ಮಂದಿ ಮಾಶಾಸನ ಫಲಾನುಭವಿಗಳಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತ ಕಲೆ ಹಾಕಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ