ಕೊರೋನಾ ವ್ಯಾಕ್ಸಿನ್ ಹಾಕಿಸಿ ಕೊಳ್ಳದಿದ್ದರೆ, ರೇಷನ್ ಇಲ್ಲ, ಪಿಂಚಣಿಯೂ ಇಲ್ಲ – ಡಿಸಿ ಆದೇಶ

Team Newsnap
1 Min Read

ಚಾಮರಾಜನಗರ ಜಿಲ್ಲೆಯ ಕೆಲವು ಕಡೆ ಕೊರೊನಾ ವ್ಯಾಕ್ಸಿನೇಷನ್​ ಹಾಕಿಸಿ ಕೊಳ್ಳಲು ಜನ‌ ಮೀನಾ ಮೇಷ ಎಣಿಸುತ್ತಿದ್ದರೆ, ಮತ್ತೊಂದು ಕಡೆ ವ್ಯಾಕ್ಸಿನೇಷನ್‌
ವೇಗ ಹೆಚ್ಚಿಸಿ ಸರ್ಕಾರದ ಗುರಿ ಮುಟ್ಟುವ ಸಲುವಾಗಿ ಚಾಮರಾಜನಗರ ಜಿಲ್ಲಾಡಳಿತ ಜನರಿಗೆ ಚುರುಕು ಮುಟ್ಟಿಸುವ ನಿಯಮಗಳನ್ನು ಜಾರಿ ತಂದಿದೆ.

ಇದೊಂದು ರೀತಿಯಲ್ಲಿ ವಿಭಿನ್ನ ಅಭಿಯಾನ. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಸೂಚನೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ವ್ಯಾಕ್ಷಿನ್ ಪ್ರಮಾಣಪತ್ರ ಇದ್ದರೆ ಮಾತ್ರ ಮಾಶಾಸನ ಪಾವತಿ ಮಾಡುವಂತೆ ಎಲ್ಲ ಬ್ಯಾಂಕ್​ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಲಸಿಕೆ ಹಾಕಿಸಿಕೊಳ್ಳಲು ಕೆಲವು ಜನರು ಉದಾಸೀನ ತೋರಿದ ಹಿನ್ನೆಲೆ ಜನರಿಗೆ ಕೊರೊನಾ ಸೋಂಕಿನ ಬಗ್ಗೆ ಗಂಭೀರತೆ ಮೂಡಿಸಲು, ಜನರ ಆರೋಗ್ಯ ಸುರಕ್ಷತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವುದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ
ಅಭಿಪ್ರಾಯ.

ಚಾಮರಾಜನಗರ ಜಿಲ್ಲೆಯಲ್ಲಿ 2 ಲಕ್ಷ 90 ಸಾವಿರ ಬಿಪಿಎಲ್, ಅಂತ್ಯೋದಯ ಪಡಿತರದಾರರು ಇದ್ದಾರೆ. ಹಾಗೂ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ 2 ಲಕ್ಷ 20 ಸಾವಿರ ಮಂದಿ ಮಾಶಾಸನ ಫಲಾನುಭವಿಗಳಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತ ‌ಕಲೆ ಹಾಕಿದೆ.

Share This Article
Leave a comment