ಮುರುಘಾ ಶಿವಮೂರ್ತಿ ಸ್ವಾಮಿ ವಿರುದ್ಧ 3 ನೇ FIR ದಾಖಲು

Team Newsnap
1 Min Read

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಚಿತ್ರದುರ್ಗ ಗ್ರಾಮೀಣ ಪೊಲೀಸರು ಮಠಾಧೀಶರ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಶಿವಮೂರ್ತಿ ಸ್ವಾಮಿ, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಠವು ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ ಐದು ವರ್ಷದ ಮತ್ತು 17 ವರ್ಷದ ಬಾಲಕಿಯ ವಿವರಗಳನ್ನು ಮಠವು ಉದ್ದೇಶಪೂರ್ವಕವಾಗಿ ಮರೆಮಾಚಿದೆ ಮತ್ತು ಈ ಮೂಲಕ ಬಾಲನ್ಯಾಯ ಕಾಯ್ದೆಯ ಸೆಕ್ಷನ್ 32 ಅನ್ನು ಉಲ್ಲಂಘಿಸಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ದೂರಿನಲ್ಲಿ ಆರೋಪಿಸಿದೆ.

ಅ. 12 ರಂದು ಮಠದ ಹಾಸ್ಟೆಲ್ ಆವರಣದಲ್ಲಿ ಸುಮಾರು ಐದು ವರ್ಷದ ಬಾಲಕಿಯೊಬ್ಬಳು ಪತ್ತೆಯಾಗಿದ್ದಳು. ಮಗುವನ್ನು ಮಠದಿಂದ ನಡೆಸಲ್ಪಡುವ ವಿಶೇಷ ದತ್ತು ಕೇಂದ್ರದಲ್ಲಿ ನೋಂದಾಯಿಸಲಾಗಿಲ್ಲ, ಇದು ಕಾಯ್ದೆಯ ಉಲ್ಲಂಘನೆಯಾಗಿದೆ.

Share This Article
Leave a comment