KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ: ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್

Team Newsnap
1 Min Read

ಕೆಎಂಎಫ್ (KMF) ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಕೆಎಂಎಫ್ ಅಧ್ಯಕ್ಷರು, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಲೀಗಲ್ ನೋಟೀಸ್ ಜಾರಿ ಮಾಡಲಾಗಿದೆ.

ಇದನ್ನು ಓದಿ :ತುಮಕೂರಿನಲ್ಲಿ ಪ್ರಿಯತಮ ಅಪಘಾತದಲ್ಲಿ ಸಾವು, ವಿಷ ಸೇವಿಸಿ ಜೀವ ಬಿಟ್ಟ ಪ್ರಿಯತಮೆ

ನಕಲಿ ತುಪ್ಪ ಮಾರಾಟ ತಡೆಗೆ ಕ್ರಮ ವಹಿಸಲು ತಂತ್ರಜ್ಞಾನ ಬಳಕೆಗೆ ಟೆಂಡರ್ ಕರೆಯಲಾಗಿತ್ತು. ನೈಲಾನ್ ಬ್ಯಾರಿಯರ್ ಫಿಲ್ಮ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ವೇಳೆ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ.

ಒಂದೇ ಕಂಪನಿಯ 2 ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ.

Share This Article
Leave a comment