ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಮಂತ್ರಿ 14 ದಿನ ನ್ಯಾಯಾಂಗ ಬಂಧನ

Team Newsnap
1 Min Read

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಆದೇಶಿಸಿದೆ

ದೇಶ್‌ಮುಖ್‌ ಅವರನ್ನು 9 ದಿನ ನಮ್ಮ ಕಸ್ಟಡಿ ವಹಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಮಾಡಿದ್ದ ಮನವಿಯನ್ನು ಕೋರ್ಟ್‌ ತಿರಸ್ಕರಿಸಿದೆ.

ಇದೇ ವೇಳೆ ದೇಶ್‌ಕುಖ್‌ ಪುತ್ರ ಹೃಷಿಕೇಶ್‌ ಶನಿವಾರ ಸೆಷನ್ಸ್‌ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್‌ ಇಲಾಖೆಯಲ್ಲಿ 100 ಕೋಟಿ ಲಂಚ ವಸೂಲಿ, ಸುಲಿಗೆ ಕುರಿತು ಮುಂಬೈ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್‌ಮುಖ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಈ ಪ್ರಕರಣದಲ್ಲಿ ದೇಶ್‌ಮುಖ್‌ ಅವರನ್ನು ಇಡಿ ಕಳೆದ ಸೋಮವಾರ ಬಂಧಿಸಿ ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

Share This Article
Leave a comment