ನಗರದಲ್ಲಿ ಅಕ್ರಮವಾಗಿ ಕೊರೊನಾ ವ್ಯಾಕ್ಸಿನ್ ಮಾರಾಟ ಮಾಡಿ ದಾಖಲೆ ಸಮೇತ ಸಿಕ್ಕಿಬಿದ್ದ ವೈದ್ಯೆ ಹಾಗೂ ಆಕೆಯ ಶಿಷ್ಯೆಯ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರಿಂದ ಹಣ ಪಡೆದು ಲಸಿಕೆ ಮಾರುತ್ತಿದ್ದ ಆರೋಪದ ಮೇಲೆ ನಿನ್ನೆಯಷ್ಟೇ ವೈದ್ಯೆ ಪುಷ್ಪಿತಾ ಹಾಗೂ ಆಕೆಯ ಸ್ನೇಹಿತೆ ಪ್ರೇಮಲತಾಳನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಗಳ ಹೇಳಿಕೆ ಆಧಾರದ ಮೇಲೆ ಐಪಿಸಿ ಸೆಕ್ಷನ್ 403, 409, 380, 420 ರ ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.
ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುಷ್ಪಿತಾ, ಲಸಿಕೆಯನ್ನು ಕದ್ದು ಅನ್ನಪೂರ್ಣೇಶ್ವರಿ ನಗರದಲ್ಲಿರುವ ಪ್ರೇಮ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು.
ಈ ಪ್ರೇಮ ತಾನು ಕರೆಸಿದ ವ್ಯಕ್ತಿಗಳಿಂದ ಹಣ ಪಡೆದು ಅಕ್ರಮವಾಗಿ ವ್ಯಾಕ್ಸಿನೇಷನ್ ನೀಡಲಾಗುತ್ತಿತ್ತು. ಏ.23 ರಿಂದ ತಲಾ 500 ರೂಪಾಯಿ ಪಡೆದು ವ್ಯಾಕ್ಸಿನ್ ನೀಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವ್ಯಾಕ್ಸಿನ್ ಪಡೆಯುವ ನೆಪದಲ್ಲಿ ತೆರಳಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- 12 ರಾಶಿಗಳ 2025ರ ವಾರ್ಷಿಕ ಭವಿಷ್ಯ
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
- ಅಪ್ಪನ ಅಕ್ಕರೆ ಮತ್ತು ತ್ಯಾಗ: ಮಗನ ನೆನಪಿನಲ್ಲಿ ಉಳಿದ ಅನನ್ಯ ಕಥೆ
- ಚಾಮರಾಜನಗರ ಬಂದ್: ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ
More Stories
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
ಜ. 2 ರಂದು ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಿರ್ಣಯ
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!