ನಾನು ಸಿಎಂ ಅಲ್ಲ. ಕಾಮನ್ ಮ್ಯಾನ್. ಸರಳ ರಾಜಕಾರಣಿ ಎಂದು ಬಸವರಾಜ ಬೊಮ್ಮಾಯಿ ಅವರೇ ಹಲವು ವೇದಿಕೆಯಲ್ಲಿ ಹೇಳಿದ್ದಾರೆ.
ಮಧ್ಯರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದಾಗಲೂ ಝೀರೋ ಟ್ರಾಫಿಕ್ ನಲ್ಲಿ ತಡಸದಿಂದ ಹುಬ್ಬಳ್ಳಿವರೆಗೆ ಸಿಎಂ ಬೊಮ್ಮಾಯಿ ಪ್ರಯಾಣ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮಧ್ಯರಾತ್ರಿ ಸಿಎಂಗೆ ಝೀರೋ ಟ್ರಾಫಿಕ್ ಅವಕಾಶ ಮಾಡಿಕೊಟ್ಟಿದ್ದರಿಂದ ಅರ್ಧಗಂಟೆ ಕಲ ಸರ್ವಿಸ್ ರಸ್ತೆಯಲ್ಲಿ ನೂರಾರು ವಾಹನಗಳು ನಿಂತ ವಾಹನಗಳು ನಿಂತಿದ್ದವು.
ಬುಧವಾರ ರಾತ್ರಿ ಸಿಎಂ ಹಾನಗಲ್ ವಿಧಾನಸಭಾ ಉಪಚುನಾವಣೆಯ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ ಮುಗಿಸಿ ರಾತ್ರಿ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್‌ನಲ್ಲಿ ಮರಳಿದ್ದಾರೆ.
ಶಿಗ್ಗಾಂವಿಯ ತಡಸ ಕ್ರಾಸ್‍ನಿಂದ ಹುಬ್ಬಳ್ಳಿವರೆಗೂ ಬೊಮ್ಮಾಯಿ ಅವರಿಗೆ ಝೀರೋ ಟ್ರಾಫಿಕ್ ನೀಡಲಾಗಿತ್ತು. ಬೇರೆ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಪೊಲೀಸರು ಅವಕಾಶ ನೀಡಿರಲಿಲ್ಲ. ರಸ್ತೆಗೆ ಇಳಿಯಲು ಅವಕಾಶ ನೀಡದ ಕಾರಣ ಸರ್ವಿಸ್ ರಸ್ತೆಯಲ್ಲೇ ಇತರೇ ವಾಹನಗಳು ನಿಂತಿದ್ದವು. ಪೊಲೀಸರು ತಡೆದ ಪರಿಣಾಮ ಸುಮಾರು 20 ನಿಮಿಷದಿಂದ ಅರ್ಧಗಂಟೆಯವರೆಗೂ ವಾಹನಗಳು ಸರ್ವಿಸ್ ರಸ್ತೆಯಲ್ಲೇ ನಿಂತಿದ್ದವು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ