December 19, 2024

Newsnap Kannada

The World at your finger tips!

election , politics , JDS

ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ಆತಂಕವೂ ನನಗಿಲ್ಲ – ಹೆಚ್ ಡಿ ಕೆ

Spread the love

ಬೈ ಎಲೆಕ್ಷನ್​​ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ. ಯಾವ ಆತಂಕವೂ ನನಗಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು

ಫಲಿತಾಂಶ ಪ್ರಕಟವಾದ ನಂತರ
ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಮಿ ಜೆಡಿಎಸ್‌ ಪಕ್ಷವು ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಹೇಳಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಸಿಂಧಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ ಎಂದರು.

ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿತು. ಜೊತೆಗೆ, ನಮ್ಮ ಸಂಘಟನೆಯನ್ನೂ ದುರ್ಬಲ ಮಾಡಲಾಗಿತ್ತು. ಇದು ನನ್ನ ಗಮನದಲ್ಲಿತ್ತು. ಮತಗಟ್ಟೆಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವುದೇ ದೊಡ್ಡ ಸವಾಲಾಗಿತ್ತು. ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು ಎಂದರು

ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದು ಅವರು ಹೇಳಿದರು.

ಹಾನಗಲ್​​​ನಲ್ಲಿ ನಮಗೆ ನೆಲೆ ಇರಲಿಲ್ಲ. ಆದರೆ, ಸಿಂಧಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್‌ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದು ಅವರು ತಿಳಿಸಿದರು.

ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೆಚ್‌ಡಿಕೆ ಅವರು ಹೇಳಿದರು.

8 ರಿಂದ ಜಿಲ್ಲಾವಾರು ಸಭೆ:

ನವೆಂಬರ್‌ 8ರಿಂದ 16ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ. ಪದಾಧಿಕಾರಿಗಳು ಹಾಗೂ ಸಂಭನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ೨೦೨೩ಕ್ಕೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!