ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಸಮವಸ್ತ್ರ ಸಂಹಿತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿಚಾರಣೆಯನ್ನು ಮುಂದೂಡುವಂತೆ ಹಿಜಾಬ್ ಪ್ರಕರಣದ ಆರು ವಿದ್ಯಾರ್ಥಿನಿಯರು ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಈಗ ಹಿಜಾಬ್ ಕೇಸ್ ಹೈಕೋರ್ಟ್ ಅಂಗಳದಲ್ಲಿದೆ. ನಿನ್ನೆ ಸುಧೀರ್ಘ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ.
ಈ ವಿಚಾರಣೆಯನ್ನು ಪಂಚರಾಜ್ಯ ಚುನಾವಣೆ ಮುಗಿಯೋವರೆಗೂ ಅಂದರೆ ಫೆಬ್ರವರಿ 28ರ ವರೆಗೆ ಮುಂದೂಡುವಂತೆ, ಆರು ವಿದ್ಯಾರ್ಥಿನಿಯರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಪ್ರಕರಣ ರಾಜಕೀಯ ಸ್ವರೂಪ ಪಡೆದಿದ್ದು, ಅರ್ಜಿಯ ವಿಚಾರಣೆ ಅಲ್ಲಿನ ಚುನಾವಣೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ವಿಚಾರಣೆಯನ್ನು ಮುಂದೆ ಹಾಕಬೇಕು ಎಂದು ವಿದ್ಯಾರ್ಥಿನಿಯರು, ಹಿರಿಯ ವಕೀಲ ಮೊಹಮ್ಮದ್ ತಾಹಿರ್ ಮೂಲಕ ಚರ್ಚೆ ನಡೆಸಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಅರ್ಜಿ ವಿಚಾರಣೆ ತೀವ್ರ ಕುತೂಹಲ ಮೂಡಿಸಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ