March 5, 2025

Newsnap Kannada

The World at your finger tips!

nirmala seetaram

ಕೇಂದ್ರ ಸರ್ಕಾರದಿಂದ ರೈತರಿಗೆ ಶುಭವಾರ್ತೆ: ‘ಧನಧಾನ್ಯ’ ಕೃಷಿ ಯೋಜನೆ ಜಾರಿ

Spread the love

ನವದೆಹಲಿ: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ ಸಿಕ್ಕಿದ್ದು, ‘ಪಿಎಂ ಧನಧಾನ್ಯ ಕೃಷಿ ಯೋಜನೆ’ ಜಾರಿಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಇದು 10 ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ. ಕೃಷಿ ವಲಯವನ್ನು ಬಜೆಟ್‌ನಲ್ಲಿ ಮೊದಲ ಮಹತ್ವದ ಎಂಜಿನ್‌ ಎಂದು ಅವರು ವಿವರಿಸಿದರು.

ಪಿಎಂ ಧನಧಾನ್ಯ ಕೃಷಿ ಯೋಜನೆ 100 ಕಡಿಮೆ ಉತ್ಪಾದಕತೆ ಹೊಂದಿರುವ ಜಿಲ್ಲೆಗಳನ್ನು ಒಳಗೊಂಡಿರುತ್ತದೆ. ಈ ಯೋಜನೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ, ಪಂಚಾಯತ್ ಮಟ್ಟದಲ್ಲಿ ಸಂಗ್ರಹಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ 1.7 ಕೋಟಿ ರೈತರು ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರಗಳ ಜೊತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗುವುದು.

ಈ ಕಾರ್ಯಕ್ರಮದಲ್ಲಿ ಜಾಗತಿಕ ಕೃಷಿ ಪದ್ಧತಿಗಳನ್ನು ಅಳವಡಿಸಲು ಒತ್ತು ನೀಡಲಾಗುವುದು. ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಉದ್ದು, ತೊಗರಿ ಮತ್ತು ಮಸೂರ್ ಬೆಳೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.ಇದನ್ನು ಓದಿ –ಕ್ಷಮೆಯಿರದ ತಪ್ಪುಗಳ ಚಕ್ರವ್ಯೂಹದೊಳಗೆ….

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಅನ್ನು ಇಂದು ಮಂಡಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!