September 27, 2022

Newsnap Kannada

The World at your finger tips!

digital cash

ಚಾಮುಂಡಿ ಬೆಟ್ಟದಲ್ಲಿ ಡಿಜಿಟಲ್ ಹುಂಡಿ ವ್ಯವಸ್ಥೆ ಜಾರಿ: ಸ್ಕ್ಯಾನ್ ಮಾಡಿ ಕಾಣಿಕೆ ನೀಡಿ

Spread the love

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತರಿಗೆ ಅನುಕೂಲವಾಗಲೆಂದು ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.

ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್. ಮಂಜುನಾಥಸ್ವಾಮಿ ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ – ಹುಂಡಿ ಬಿಡುಗಡೆ ಮಾಡಿದರು.

ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ವ್ಯವಸ್ಥೆ ಮಾಡಲಾಗಿದೆ.

ನಂತರ ಮಾತನಾಡಿದ ಡಾ. ಬಿ.ಎಸ್. ಮಂಜುನಾಥಸ್ವಾಮಿ, ಜಗತ್ತು ಡಿಜಿಟಲೀಕರಣದತ್ತ ದಾಪುಗಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲವಾಗಲೆಂದು ಇ-ಪೇಮೆಂಟ ವ್ಯವಸ್ಥೆ ಜಾರಿಗೆ ತರಲಾಗಿದ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.

ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ .ಜಿ. ಕೃಷ್ಣ ಅವರು ಮಾತನಾಡಿದರು.

error: Content is protected !!