ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಪಾರವಾದ ನಂಬಿಕೆ ಇಟ್ಟು ನಮಗೆ ಅವಕಾಶ ಕೊಟ್ಟಿದ್ದಾರೆ. ನುಡಿದಂತೆ ನಡೆಯುವವರು ನಾವು. ನಾವು ಅಧಿಕಾರ ತೆಗೆದುಕೊಂಡ ಮೊದಲ ದಿನದಿಂದ ಏನು ಮಾತನಾಡಿದ್ದೇವೆ ಆ ಮಾತಿಗೆ ಬದ್ಧರಾಗಿದ್ದೇವೆ ಎಂಬುದಾಗಿ ಹೇಳಿದರು.
ಸಿಎಂ ಸಿದ್ಧರಾಮಯ್ಯ ಅವರು, ನಾವು ವಿಧಾನಸಭಾ ಚುನಾವಣೆ ಸಂದರ್ಭಕ್ಕೂ ಮುಂಚೆ ನಮ್ಮ ಪಕ್ಷದ ವತಿಯಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ನಾನು ಮತ್ತು ನಮ್ಮ ಅಧ್ಯಕ್ಷರಾದಂತ ಡಿಕೆ ಶಿವಕುಮಾರ್ ಗ್ಯಾರಂಟಿ ಕಾರ್ಡ್ ಗಳಿಗೆ ನಮ್ಮ ಸಹಿ ಕೂಡ ಮಾಡಿದ್ದೆವು. ನಾವು ಗ್ಯಾರಂಟಿಯಾಗಿ, ಈ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಜನರಿಗೆ ತಲುಪಿಸುತ್ತೇವೆ ಅಂತ ಮಾತುಗಳನ್ನು ಗ್ಯಾರಂಟಿ ಕಾರ್ಡ್ ಗಳನ್ನು ನಮ್ಮ ಕಾರ್ಯಕರ್ತರ ಮೂಲಕ ಎಲ್ಲ ಮನೆಗಳಿಗೆ ಹಂಚಿಸಲಾಗಿತ್ತು ಎಂದರು.
ನಾವು ಬಹಳ ಸುಧೀರ್ಘವಾಗಿ ಐದು ಗ್ಯಾರಂಟಿಗಳನ್ನು ಚರ್ಚೆ ಮಾಡಿದ್ದೇವೆ. ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಕೊಡಬೇಕು ಎಂಬುದಾಗಿ ತೀರ್ಮಾನ ಮಾಡಿದ್ದೇವೆ. ಅದು ಯಾವುದೇ ಜಾತಿ, ಯಾವುದೇ ಧರ್ಮ, ಯಾವುದೇ ಭಾಷೆ ಇವು ಯಾವುದು ಇಲ್ಲದೆ ಎಲ್ಲಾ ಜಾತಿ, ಧರ್ಮ, ಭಾಷೆಯವರಿಗೆ ಕರ್ನಾಟಕದ ಜನರಿಗೆ, ಜನತೆಗೆ ಈ ಗ್ಯಾರಂಟಿಗಳನ್ನು ತಲುಪಿಸುತ್ತೇವೆ. ಜಾರಿಗೆ ಕೊಡುತ್ತೇವೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು