ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಪಾರವಾದ ನಂಬಿಕೆ ಇಟ್ಟು ನಮಗೆ ಅವಕಾಶ ಕೊಟ್ಟಿದ್ದಾರೆ. ನುಡಿದಂತೆ ನಡೆಯುವವರು ನಾವು. ನಾವು ಅಧಿಕಾರ ತೆಗೆದುಕೊಂಡ ಮೊದಲ ದಿನದಿಂದ ಏನು ಮಾತನಾಡಿದ್ದೇವೆ ಆ ಮಾತಿಗೆ ಬದ್ಧರಾಗಿದ್ದೇವೆ ಎಂಬುದಾಗಿ ಹೇಳಿದರು.
ಸಿಎಂ ಸಿದ್ಧರಾಮಯ್ಯ ಅವರು, ನಾವು ವಿಧಾನಸಭಾ ಚುನಾವಣೆ ಸಂದರ್ಭಕ್ಕೂ ಮುಂಚೆ ನಮ್ಮ ಪಕ್ಷದ ವತಿಯಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ನಾನು ಮತ್ತು ನಮ್ಮ ಅಧ್ಯಕ್ಷರಾದಂತ ಡಿಕೆ ಶಿವಕುಮಾರ್ ಗ್ಯಾರಂಟಿ ಕಾರ್ಡ್ ಗಳಿಗೆ ನಮ್ಮ ಸಹಿ ಕೂಡ ಮಾಡಿದ್ದೆವು. ನಾವು ಗ್ಯಾರಂಟಿಯಾಗಿ, ಈ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಜನರಿಗೆ ತಲುಪಿಸುತ್ತೇವೆ ಅಂತ ಮಾತುಗಳನ್ನು ಗ್ಯಾರಂಟಿ ಕಾರ್ಡ್ ಗಳನ್ನು ನಮ್ಮ ಕಾರ್ಯಕರ್ತರ ಮೂಲಕ ಎಲ್ಲ ಮನೆಗಳಿಗೆ ಹಂಚಿಸಲಾಗಿತ್ತು ಎಂದರು.
ನಾವು ಬಹಳ ಸುಧೀರ್ಘವಾಗಿ ಐದು ಗ್ಯಾರಂಟಿಗಳನ್ನು ಚರ್ಚೆ ಮಾಡಿದ್ದೇವೆ. ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಕೊಡಬೇಕು ಎಂಬುದಾಗಿ ತೀರ್ಮಾನ ಮಾಡಿದ್ದೇವೆ. ಅದು ಯಾವುದೇ ಜಾತಿ, ಯಾವುದೇ ಧರ್ಮ, ಯಾವುದೇ ಭಾಷೆ ಇವು ಯಾವುದು ಇಲ್ಲದೆ ಎಲ್ಲಾ ಜಾತಿ, ಧರ್ಮ, ಭಾಷೆಯವರಿಗೆ ಕರ್ನಾಟಕದ ಜನರಿಗೆ, ಜನತೆಗೆ ಈ ಗ್ಯಾರಂಟಿಗಳನ್ನು ತಲುಪಿಸುತ್ತೇವೆ. ಜಾರಿಗೆ ಕೊಡುತ್ತೇವೆ ಎಂದರು.
- ಜುಲೈ ತಿಂಗಳಿನಿಂದ 200 ಯೂನಿಟ್ ವರೆಗೆ ವಿದ್ಯುತ್ ಉಚಿತ
- ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ ಖಾತೆಗೆ ಜಮಾ.
- ಜುಲೈ.1ರಿಂದ ಬಿಪಿಎಲ್, ಎಪಿಎಲ್ ಕಾರ್ಡ್ ನ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲಾಗುತ್ತದೆ.
- ಜೂನ್ 11ರಿಂದ ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ.
- ಯುವನಿಧಿ ಯೋಜನೆಯ ಅಡಿಯಲ್ಲಿ ಪದವೀಧರರಿಗೆ ರೂ.3000, ಡಿಪ್ಲೋಮಾದವರಿಗೆ ರೂ.1,500 ಮುಂದಿನ 24 ತಿಂಗಳವರೆಗೆ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
- ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
- ಕನ್ನಡ ರಾಜ್ಯೋತ್ಸವ
- 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
- ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್
- ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರಿ ಮಳೆ ಸಂಭವ
More Stories
ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್