ಮೇಕೆದಾಟು ಯೋಜನೆ ಅನುಷ್ಠಾನ : ಜ. 9 ರಿಂದ ಕಾಂಗ್ರೆಸ್ ಪಾದಯಾತ್ರೆ – ಡಿಕೆಶಿ ಪ್ರಕಟ

Team Newsnap
1 Min Read

ಜನವರಿ 9ರಂದು ಬೆಳಗ್ಗೆ 9.30 ಕ್ಕೆ ಕನಕಪುರ ತಾಲೂಕಿನ ಮೇಕೆದಾಟುವಿನಿಂದ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಲಿದೆ.

ಈ ಪಾದಯಾತ್ರೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಸಂಘಟನೆಗಳು ಹಾಗೂ ಸಾರ್ವಜನಿಕರು ಸಹ ಪಾಲ್ಗೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಜನವರಿ 9ರಂದು ಆರಂಭಗೊಳ್ಳುವ ಪಾದಯಾತ್ರೆ ಐದನೇ ದಿನ ಬೆಂಗಳೂರು ನಗರ ತಲುಪಲಿದೆ ಎಂದರು.

10 ಜಿಲ್ಲೆಗಳ 2.5 ಕೋಟಿಗೂ ಹೆಚ್ಚು ಮಂದಿಯ ಅನುಕೂಲಕ್ಕೆ ಒದಗಿಬರುವ ಯೋಜನೆಯನ್ನು ಬಿಜೆಪಿ ಸರ್ಕಾರ ತೀವ್ರ ನಿರ್ಲಕ್ಷ್ಯ ಮಾಡಿದೆ. ಒಟ್ಟು 169 ಕಿಲೋ ಮೀಟರ್ ಪಾದಯಾತ್ರೆ ಮಾಡುತ್ತಿದ್ದೇವೆ. ಕನಕಪುರದಿಂದ ಬೆಂಗಳೂರುವರೆಗೂ ಪಾದಯಾತ್ರೆ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್​ ಹೇಳಿದರು.

ಮೇಕೆದಾಟು, ರಾಜ್ಯದ ಮಹತ್ವದ ಯೋಜನೆ.ಪೋಲಾಗಿ ಸಮುದ್ರ ಸೇರುವ ನೀರನ್ನು ಕೃಷಿ ಹಾಗೂ ವಿದ್ಯುತ್ ಉತ್ಪಾದನೆಗಾಗಿ ಸಂಗ್ರಹಿಸಿಸುವುದೇ ಈ ಯೋಜನೆಯ ಉದ್ದೇಶ.

ಆದರೆ ಈ ಯೋಜನೆಯ ಅನುಷ್ಠಾನ ಮಾತ್ರ ಈವರೆಗೂ ಆಗಿಲ್ಲ. ಯಾವುದೇ ಸರ್ಕಾರ ಬಂದರೂ ಒಂದಲ್ಲ ಒಂದು ಅಡ್ಡಿ ಆತಂಕಗಳು ಎದುರಾಗುತ್ತಲೇ ಇದೆ. ಆದರೆ ಈಗ ಮೇಕೆದಾಟು ಯೋಜನೆಯನ್ನು ಸರ್ಕಾರ ಜಾರಿ ಮಾಡಲೇ ಬೇಕು ಅಂತಾ ಕಾಂಗ್ರೆಸ್ ಟೊಂಕ ಕಟ್ಟಿ ನಿಂತಿದೆ. ಹೀಗಾಗಿ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಬೃಹತ್​ ಪಾದಯಾತ್ರೆ ನಡೆಸೋದಾಗಿ ಕಾಂಗ್ರೆಸ್​ ಘೋಷಿಸಿದೆ.

ಈ ನಡುವೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಮೇಕೆದಾಟು ಯೋಜನೆಯನ್ನು ಗಂಭೀರವಾಗಿ ತಗೆದುಕೊಂಡಿದ್ದೇವೆ. ಕಾವೇರಿ ಕಣಿವೆಯಲ್ಲಿ ಸಂಕಷ್ಟದ ವರ್ಷಗಳಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವತ್ತ ಹೆಚ್ಚೆ ಇಟ್ಟಿದ್ದೇವೆ ಎಂದಿದ್ದಾರೆ.

Share This Article
Leave a comment