Categories: Main News

ರಾಜ್ಯ ಸರ್ಕಾರ ಸೂಕ್ತ ಮಾರ್ಗಸೂಚಿ ಜಾರಿ : ಜನರ ಜೀವ ಮುಖ್ಯ – ಸಚಿವ ಡಾ.ಕೆ.ಸುಧಾಕರ್

ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಮೈಸೂರಿನಲ್ಲಿ ಗುರುವಾರ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರಕ್ಕೆ ಜೀವನಕ್ಕಿಂತ ಜೀವ ಮುಖ್ಯ ಎಂಬ ಚಿಂತನೆ ಇದೆ. ಕೂಲಿ ಕಾರ್ಮಿಕರು, ಕೃಷಿ ಚಟುವಟಿಕೆ, ಕೈಗಾರಿಕೆ, ಕಚೇರಿಯಲ್ಲಿ ಕೆಲಸ ಮಾಡುವವರಿಗೆ ತೊಂದರೆ ಮಾಡಿಲ್ಲ. ಗುಂಪುಗೂಡುವುದನ್ನು ಹಾಗೂ ಸಾಂಕ್ರಾಮಿಕ ಹರಡಲು ಕಾರಣವಾಗುವ ಚಟುವಟಿಕೆಗಳನ್ನು ಮಾತ್ರ ನಿರ್ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ. ಪರೀಕ್ಷೆ, ಸಂಪರ್ಕ ಪತ್ತೆ, ಲಸಿಕೆ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಈವರೆಗೆ 7 ಲಕ್ಷ ಜನರಿಗೆ ಲಸಿಕೆ ನೀಡಿದ್ದು, ಇನ್ನೂ ಹೆಚ್ಚಿನವರಿಗೆ ನೀಡಲು ಸೂಚಿಸಲಾಗಿದೆ. ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ ಎಂದರು.

ಮೈಸೂರಿನಲ್ಲಿ ಮರಣ ಪ್ರಮಾಣ ಶೇ.4 ರಷ್ಟಿದೆ. ಬಹುಪಾಲು ಮರಣಗಳು, ರೋಗಿಗಳು ತಡವಾಗಿ ಆಸ್ಪತ್ರೆಗೆ ಬಂದಿರುವುದರಿಂದ ಸಂಭವಿಸಿದೆ. ಹೃದಯ ಸಮಸ್ಯೆ ಮೊದಲಾದ ಬೇರೆ ಸಮಸ್ಯೆಗಳಿಂದಲೂ ಸಾವಾಗಿದೆ. ಸಾವಿನ ಆಡಿಟ್ ಮಾಡುತ್ತಿದ್ದು, ನಿಖರ ಕಾರಣದ ಬಗ್ಗೆ ವರದಿಯನ್ನು ಬಂದಿದೆ. ಮೈಸೂರಿನಲ್ಲಿ ಆರೋಗ್ಯ ಸೌಲಭ್ಯಗಳು ಉತ್ತಮವಾಗಿದ್ದು, ಮರಣ ಪ್ರಮಾಣ ನಿಯಂತ್ರಿಸಬೇಕಿದೆ ಎಂದರು.

ಜಿಲ್ಲೆಯಲ್ಲಿ ಒಂದೆರಡು ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ನಡಿ ಇರಲಿಲ್ಲ. ಈಗ ಮತ್ತೆ ಆಸ್ಪತ್ರೆಗಳು ನೋಂದಾಯಿಸಿಕೊಂಡಿವೆ. ಇನ್ನು ಶೇ.50 ರಷ್ಟು ಹಾಸಿಗೆ ಕೋವಿಡ್‍ಗೆ ಮೀಸಲಿಡಲಾಗುತ್ತದೆ. ಆಸ್ಪತ್ರೆಗಳು ಕೊಡದಿದ್ದರೆ ಸರ್ಕಾರವೇ ಪಡೆಯಲಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024