ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ವಿಡಿಯೋ ಸಂವಾದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದಲ್ಲಿ ತೀವ್ರ ಬರ ಸ್ಥಿತಿ, ಕುಡಿಯುವ ನೀರಿನ ತೊಂದರೆ, ಜಾನುವಾರುಗಳಿಗೆ ಮೇವು ಸೇರಿ ಹಲವು ಸಮಸ್ಯೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.
ಪ್ರತಿ ಜಿಲ್ಲೆಯ ಕುಡಿಯುವ ನೀರು, ಬರ ನಿರ್ವಹಣೆ ಜಾನುವಾರುಗಳಿಗೆ ಮೇವು, ಉದ್ಯೋಗ, ಕೃಷಿ ಸಂಬಂಧಿತ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಸೂಚನೆ ನೀಡಲಿದ್ದಾರೆ.Lok Sabha Election : ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ – ಬಿ ಎಸ್ ವೈ
ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೇ ಬರ ಪರಿಸ್ಥಿತಿ ಅವಲೋಕಿಸಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ