ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿರ್ಧಾರ ನಿಜ. ಆದರೆ ಒಂದು ವಾರ ಅಥವಾ 10 ದಿನ ಟೈಂ ಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳೆ ಬೆಳಗಾವಿಯಲ್ಲಿ ಶುಕ್ರವಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳೆ ಮುಂದಿನ 10 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ರಾಜೀನಾಮೆ ನಂತರ ನಾನು ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ . ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ನನಗೆ ಬಿಜೆಪಿ ಪಕ್ಷವೆ ಗಟ್ಟಿ. ಕೆಲವು ಸಂಗತಿ ಗಳ ಬಗ್ಗೆ ನಾನು ಈಗ ಹೇಳುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳಿವೆ ಎಂದರು.
ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ನನ್ನನ್ನು ಯಾರಾದರೂ ಮೂಲೆ ಗುಂಪು ಮಾಡುವ ಬಯಕೆ ಹೊಂದಿದ್ದರೆ. ಅದು ಮೂರ್ಖತನದ ಪರಮಾವಧಿಯಾಗುತ್ತದೆ. ನಂಗೆ ಒಂದು ಸರ್ಕಾರ ಪತನಗೊಳಿಸಿ ಮತ್ತೊಂದು ಸರ್ಕಾರ ರಚನೆ ಮಾಡುವ ಶಕ್ತಿ ಇರುವಾಗ ನಾನೇಕೆ ಮಂತ್ರಿ ಗಿರಿ ಕೇಳಲಿ ಎಂದು ಮರು ಪ್ರಶ್ನೆ ಮಾಡಿದರು.
ಮಹಾರಾಷ್ಟ್ರ ಮಾಜಿ ಮುಖ್ಯ ಮಂತ್ರಿ ಫಡ್ನವಿಸ್ ನನ್ನ ಗಾಡ್ ಫಾದರ್ . ಅವರನ್ನು ಭೇಟಿಯಾಗಿ ನನ್ನ ಸಮಸ್ಯೆ, ಕಿರುಕುಳ ಮತ್ತು ರಾಜ್ಯ ಬಿಜೆಪಿ ಪಕ್ಷದ ಈಗಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದೇನೆ ಎಂದರು.
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ