ಮುಂದಿನ 10 ದಿನದೊಳಗೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ – ಡಿಸಿಎಂ

Team Newsnap
1 Min Read
High Court stays against FIR on former minister Ashwath Narayan ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ದದ FIR ಗೆ ಹೈಕೋರ್ಟ್ ತಡೆ

ಮುಂದಿನ 10 ದಿನದೊಳಗೆ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಅಲ್ಲದೆ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಿಸುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್​ನಾರಾಯಣ ಹೇಳಿದರು. ‌

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ, ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳ ಲಾಗುವುದು. 18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಬೇಕು, ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್​ ಲಸಿಕೆ ಪಡೆದಿರಬೇಕು. ಇಲ್ಲವಾದರೆ, ಪ್ರವೇಶ ನಿರಾಕರಿಸಲಾಗುವುದು ಎಂದರು.

ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನಲೆ ಕಾಲೇಜು ಪುನರ್​ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಆದ್ದರಿಂದ ಲಸಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಹಾಕಲು ತ್ವರಿತ ಕ್ರಮ ವಹಿಸಲಾಗುವುದು ಎಂದರು.‌

Share This Article
Leave a comment