ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿಯಲಾಗಿದೆ ಎಂಬ ಆರೋಪ ಕೇಳಿಬಂದ ನಂತರ ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಳು ಪ್ರತಿಭಟನೆ ನಡೆಸಿದವು. ಈ ವೇಳೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ನಡೆಸಿ, ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ವಿಕೃತಿ ಮೆರೆದಿದ್ದಾರೆ.
ಬೆಳಗಾವಿಯ ಕನಕದಾಸ ಕಾಲೋನಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ, ಖಡ್ಗ, ಗುರಾಣಿ ಬೇರೆ ಬೇರೆ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಈ ಘಟನೆ ಸಂಬಂಧ ಟಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ನಡುವೆ ಸರ್ಕಾರಿ ಬಸ್ ಮೇಲೆ ಕಲ್ಲೂತೂರಾಟ ನಡೆಸಲಾಗಿದೆ. 20 ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ಅದರಲ್ಲಿ 12 ಸರ್ಕಾರಿ ವಾಹನಗಳನ್ನು ಜಖಂ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು