ನಿನ್ನೆ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಹಿನ್ನೆಲೆಯಲ್ಲಿ ಶುಕ್ರವಾರ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಬೊಮ್ಮಾಯಿ, ಗೃಹ ಸಚಿವ ಜ್ಞಾನೇಂದ್ರರ ಭಾವ ಚಿತ್ರಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ವಿಷಪೂರಿತ ಮೊಟ್ಟೆಯನ್ನು ಎಸೆದಿದ್ದಾರೆ. ಭದ್ರತೆ ಲೋಪದಿಂದ ಈ ಕೃತ್ಯ ನಡೆದಿದೆ.ಆರ್‌ಎಸ್ಎಸ್ ಹಾಗೂ ಭಜರಂಗದಳದ ಕುಮ್ಮಕ್ಕಿನಿಂದ ಈ ಕೃತ್ಯ ನಡೆದಿದೆ ಎಂದು ಕಾರ್ಯಕರ್ತರು ದೂರಿದರು.
ಪ್ರತಿಭಟನೆ ವೇಳೆ ಕಾರ್ಯಕರ್ತರು 420 ಬಿಜೆಪಿ ಹಾಗೂ ಆರ್‌ಎಸ್‌ಎಸ್ ಎಂದು ಘೋಷಣೆ. ಮೊಟ್ಟೆ ಎಸೆದವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.
ಇದೇ ವೇಳೆ ಸಿಎಂ, ಗೃಹ ಸಚಿವರ ಭಾವಚಿತ್ರಕ್ಕೆ ಮೊಟ್ಟೆ ಹೊಡೆದು ಸಿಟ್ಟು ಹೊರ ಹಾಕಿದರು. ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣದ ಪ್ರತೀಕಾರಕ್ಕೆ ಕಾಂಗ್ರೆಸ್ ನವರು ಪ್ರತಿಭಟನೆ ವೇಳೆ ಮರಕ್ಕೆ ಫ್ಲೆಕ್ಸ್ ಕಟ್ಟಿ ಮೊಟ್ಟೆ
ಎಸೆದು ತಮ್ಮ ಆಕ್ರೋಶ ಹೊರ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ