ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ.
ಈ ಕುರಿತು ಮಾಹಿತಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದೆ ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಸರ್ಕಾರಿ ಬಸ್ ಸೇವೆ : ಸಚಿವ ಸೋಮಶೇಖರ್
ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು