Categories: Main News

ಈ ಸಮಾಜದಲ್ಲಿ ಯಾರೆಲ್ಲಾ, ಹೇಗೆಲ್ಲಾ ಇದ್ದಾರೆ ನೋಡಿ ..,

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,

ಮೆಚ್ಚುವವರಿಗೆ ಬರವಿಲ್ಲ ಟೀಕಿಸುವವರು ಕಡಿಮೆಯೇನಿಲ್ಲ,

ಅಸೂಯೆ ಒಳಗೊಳಗೆ,
ಕುಹುಕ ಮೇಲಿನ ಹೊದಿಕೆ,

ಎತ್ತಿ ಕಟ್ಟುವವರು ಹಲವರು,
ಎಚ್ಚರಿಸುವವರು ಕೆಲವರು,

ಹೃದಯ ತಟ್ಟುವವರು ಇದ್ದಾರೆ,
ಬೆನ್ನಿಗೆ ಇರಿಯುವವರೂ ಉಂಟು,

ಧೈರ್ಯ ತುಂಬುವವರು,ಭಯ ಪಡಿಸುವವರು,ಜೊತೆಯಾಗುವವರು,
ದೂರ ಸರಿಯುವವರು,ಸ್ವಾಗತಿಸುವ ವರು,ವಿರೋಧಿಸುವವರು,

ತಪ್ಪು ಅರ್ಥೈಸಿಕೊಂಡವರು,
ನಿಜದ ಅನುಭಾವಿಗಳು,
ಪೂರ್ವಾಗ್ರಹ ಪೀಡಿತರು,
ವಿಶಾಲ ದೃಷ್ಟಿಯವರು,
ಮಜಾ ತೆಗೆದುಕೊಳ್ಳುವವರು,
ಹಿತ ಬಯಸುವವರು,

ನಿರ್ಲಿಪ್ತರು – ನಿರ್ಲಕ್ಷ್ಯವಹಿಸುವವರು,
ಹಿಂಸಾವಾದಿಗಳು ಕರುಣಾಮಯಿಗಳು,
ಮೇಲೆತ್ತುವವರು, ಕೆಳಗೆ ತುಳಿಯುವ ವರು, ಸ್ವಾಭಿಮಾನಗಳು,
ಮಾರಿಕೊಂಡವರು,

ಮುಖವಾಡ ಧರಿಸಿರುವವರು,
ಸಹಜ ಸ್ವಭಾವದವರು,
ಆಕ್ರೋಶ ನುಡಿಯ ಮಾತುಗಳು
ಮೆಲು ಧ್ವನಿಯ ವಿನಯಿಗಳು,
ನಗುನಗುತ್ತಾ ಅಳಿಸುವವರು,
ಅಳುವಿನಲ್ಲಿ ನಗುತ್ತಾ ಜೊತೆಯಾಗುವವರು,

ನಿಜ ವೀರರು, ರಣ ಹೇಡಿಗಳು,
ಬಹುಮಾನಿಸುವವರು,
ಅವಮಾನಿಸುವವರು,
ಪ್ರೇರೇಪಿಸುವವರು,
ಪ್ರಚೋದಿಸುವವರು,
ತ್ಯಾಗಿಗಳು – ಸ್ವಾರ್ಥಿಗಳು,
ಜಾಣ ಪೆದ್ದರು – ಪೆದ್ದ ಜಾಣರು,

ನವ ರಸಗಳು, 64 ವಿದ್ಯೆಗಳು,
ಊಹೆಗೂ ನಿಲುಕದ ಮನಸುಗಳು……

18 ರ ಕನಸುಗಳು,30 ರ ಆಸೆಗಳು,
50 ರ ಭರವಸೆಗಳು, 70 ರ ನೋವುಗಳು, ಸಾಮಾಜಿಕ ಜಾಲತಾಣಗಳ ಅಭಿಪ್ರಾಯ.

ನಮ್ಮ ತನವೂ ಇರಬೇಕು,
ಹೊಂದಾಣಿಕೆಯೂ ಆಗಬೇಕು,
ಸಹಕಾರವೂ ಸಿಗಬೇಕು…..
ವೈವಿಧ್ಯತೆಯೂ ಬೆರೆಯಬೇಕು,
ಅತಿರೇಕಗಳ ನಡುವೆ ಸಮನ್ವಯ.. ‌…

ಈ ಎಲ್ಲದರ ನಡುವೆ ‌ವಾಸ್ತವದ ಬದುಕು, ವ್ಯಾವಹಾರಿಕ ಬದುಕು, ನೆಮ್ಮದಿಯ ಜೀವನದ ಹುಡುಕಾಟ…….

ವಯಸ್ಸಿನ ಅಂತರ,ಹಣಕಾಸಿನ ವ್ಯತ್ಯಾಸ,ಜಾತಿಯ ಕಂದರ,
ವಿದ್ಯೆಯ ಭಿನ್ನತೆ, ಅಧಿಕಾರದ ಅಸಮಾನತೆ,

ಬದುಕನ್ನು ಬಯಸುವವರಿಗೆ,
ಹೆದರಿಕೆ, ನಾಚಿಕೆ, ಅವಮಾನ,
ಆಸೆ,
ಸಾವನ್ನು ಸ್ವಾಗತಿಸುವವರಿಗೆ…….

ಹೀಗೆ ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ.

ವಿವೇಕಾನಂದ. ಹೆಚ್.ಕೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024