December 25, 2024

Newsnap Kannada

The World at your finger tips!

srirang dasara

ನಿರ್ಮಲಾನಂದನಾಥ ಶ್ರೀಗಳಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ – ಅಧೀಕೃತ ಆಹ್ವಾನ

Spread the love

ಅ. 9 ರಿಂದ ಆರಂಭವಾಗುವ ಶೀರಂಗಪಟ್ಟಣ ದಸರಾವನ್ನು ಉದ್ಘಾಟಿಸುವಂತೆ ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಸಿ. ನಾರಾಯಣ ಗೌಡರವರು ಬುಧವಾರ ಅಧಿಕೃತವಾಗಿ ಆಹ್ವಾನ ನೀಡಿದರು.

srirang dasara1

ನಾಗಮಂಗಲದ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಚಿವರು ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಗೌರವಿಸಿದರು. ಆನೆಯ ಕಲಾಕೃತಿಯ ಸ್ಮರಣಿಕೆ ನೀಡಿ ದಸರಾ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನಿಸಿದರು.

ಸ್ವಾಮೀಜಿಯವರಿಗೆ ದಸರಾ ಆಹ್ವಾನ ಪತ್ರಿಕೆ ನೀಡಿ, ಶ್ರೀಗಳಿಂದ ಶ್ರೀರಂಗಪಟ್ಟಣ ದಸರಾ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ನಾಡಿನ ಸಂಸ್ಕೃತಿಯ ಸಂಕೇತವಾಗಿರುವಂತಹ ದಸರಾವು ನಮ್ಮ ಶ್ರೀರಂಗಪಟ್ಟಣದಲ್ಲಿ ನಡೆಯುತ್ತದೆ. ಮೈಸೂರು ದಸರಾದ ರೀತಿಯಲ್ಲಿ ಮುಂಚೆ ಮೂಲವಾಗಿ ಪ್ರಾರಂಭವಾಗಿದ್ದು ನಮ್ಮ ಶ್ರೀರಂಗಪಟ್ಟಣದಲ್ಲಿ. ಅ. 9 ರಂದು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ನಮ್ಮ ಹಿರಿಯರು ಅತ್ಯುತ್ತಮವಾದ ಸಂಸ್ಕೃತಿಯನ್ನು ನಮ್ಮ ನಾಡಿಗೆ ಬಿಟ್ಟು ಹೋಗಿದ್ದಾರೆ, ಆ ಸಂಸ್ಕೃತಿಯನ್ನು ಮುಂದಿನ ಪರಂಪರೆಗೆ ಬಡಿಸಿ-ಉಣಿಸಿ, ಆಚರಿಸಿಕೊಂಡು- ಉಳಿಸಿಕೊಂಡು ಹೋಗುವಂತದ್ದು ನಮ್ಮ ಪರಂಪರಾಗತ ಸಂಸ್ಕೃತಿ ಎಂದರು.

ನಂತರ ಮಾತನಾಡಿದ ಸಚಿವರು ಮೈಸೂರು ದಸರಾದ ಮೂಲ ನೆಲೆ ಶ್ರೀರಂಗಪಟ್ಟಣ, ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೋನಾದಿಂದ ಶ್ರೀರಂಗಪಟ್ಟಣ ದಸರಾವನ್ನು ಸರಿಯಾಗಿ ಆಚರಿಸಲು ಆಗಿರಲಿಲ್ಲ, ಆದರೆ ಈ ಬಾರಿ ಅರ್ಥಪೂರ್ಣವಾಗಿ ಮತ್ತು ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತಾವುಗಳು ಆಗಮಿಸಿ ಈ ಬಾರಿಯ ದಸರಾವನ್ನು ಉದ್ಘಾಟಿಸಿ, ಜಂಬೂಸವಾರಿಗೆ ಚಾಲನೆ ನೀಡಿ ಎಂದು ಶ್ರೀ ಗಳನ್ನು ಅಧಿಕೃತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ನಾಗಮಂಗಲ ಶಾಸಕರಾದ ಸುರೇಶ್ ಗೌಡ, ಜಿಲ್ಲಾಧಿಕಾರಿ ಎಸ್. ಅಶ್ವತಿ, ಪಾಂಡವಪುರ ಉಪವಿಭಾಗಧಿಕಾರಿ ಶಿವನಂದಮೂರ್ತಿ, ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ, ನಾಗಮಂಗಲ ತಹಶೀಲ್ದಾರ್ ಕುಂ ಇ್ ಅಹಮ್ಮದ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!