ಮಾ. 12 ರಂದು ಹುಬ್ಬಳ್ಳಿಯ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌​ಫಾರಂ ಉದ್ಘಾಟನೆ

Team Newsnap
1 Min Read
Prime Minister to Mysore today, tomorrow: program details ಇಂದು , ನಾಳೆ ಮೈಸೂರಿಗೆ ಪ್ರಧಾನಿ : ಕಾರ್ಯಕ್ರಮದ ವಿವರ

ಮಾರ್ಚ್‌ 12ರಂದು ಪ್ರಧಾನಿ ಮೋದಿಯವರು ಹುಬ್ಬಳ್ಳಿಯ ಶ್ರೀ ಸಿದ್ಧರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಉದ್ಘಾಟನೆ ಮಾಡಲಿದ್ದಾರೆ.

ಪ್ರಧಾನಿ ಮೋದಿಯವರು ಐಐಟಿ-ಧಾರವಾಡದ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ವಿಶ್ವದ ಅತಿ ಉದ್ದದ ಹುಬ್ಬಳ್ಳಿ ರೈಲ್ವೆ ಪ್ಲಾಟ್‌​ಫಾರ್ಮ್‌ ಕೂಡ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾಹಿತಿ ನೀಡಿದ್ದಾರೆ.

ಈ ಪ್ಲಾಟ್‌ ಫಾರ್ಮ್‌ ಎರಡು ವರ್ಷಗಳ ಹಿಂದೆಯೇ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕಳೆದ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಟ್‌ ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಧಾನಿ ಮೋದಿವರು ಇದನ್ನು ಲೋಕಾರ್ಪಣೆ ಮಾಡಬೇಕೆಂದು ಬಯಸಿದ್ದರು.

ಈ ಮೊದಲು 1ನೇ ಪ್ಲಾಟ್‌​ಫಾರ್ಮ್‌ 550 ಮೀಟರ್‌ ಉದ್ದ ಇತ್ತು. ಇದನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1505 ಮೀಟರ್‌ವರೆಗೆ ವಿಸ್ತರಣೆ ಮಾಡಲಾಗಿದೆ.

ಇದುವರೆಗೂ ಈಶಾನ್ಯ ರೈಲ್ವೆ ವಲಯದ ಗೋರಖ್‌ಪುರ ನಿಲ್ದಾಣದಲ್ಲಿರುವ 1366 ಮೀಟರ್‌ ಉದ್ದವಿರುವ ಪ್ಲಾಟ್‌​ಫಾರಂ ಪ್ರಥಮ ಸ್ಥಾನವನ್ನು ಪಡೆದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಪ್ಲಾಟ್‌​ಫಾರಂ ಈ ಸ್ಥಾನವನ್ನು ಹಿಂದಿಕ್ಕಿ ಪ್ರಥಮ ಸ್ಥಾನವನ್ನು ಅಲಂಕರಿಸಿದೆ.

Share This Article
Leave a comment