ಗ್ರಾಮ ಪಂಚಾಯ್ತಿ ಚುನಾವಣೆಯ ಕಾವು ಕಡಮೆಯಾದರೂ ದ್ವೇಷ ಮಾತ್ರ ನಿಂತಿಲ್ಲ. ದ್ವೇಷದಿಂದಾಗಿ ಪರಸ್ಪರ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ನಿವೃತ್ತ ಶಿಕ್ಷಕ ಸಾವನ್ನೂ ಅಪ್ಪಿದ್ದಾರೆ.
ಗ್ರಾಮ ಪಂಚಾಯ್ತಿ ಚುನಾವಣೆಯ ನಂತರ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ನಿವೃತ್ತ ಶಿಕ್ಷಕ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಜಗಳೂರಿನಲ್ಲಿ ಜರುಗಿದೆ.
ಕೃಷ್ಣಪ್ಪ (68) ಮೃತಪಟ್ಟ ನಿವೃತ್ತ ಶಿಕ್ಷಕ. ಇವರ ಪುತ್ರ ವಿಜಯೇಂದ್ರಗೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ದೇವಿಕೆರೆ ಪಂಚಾಚಾಯ್ತಿ ವ್ಯಾಪ್ತಿಯ ಮಿನಿಗರಹಳ್ಳಿ ಗ್ರಾಮದಲ್ಲಿ ಸೋತ ಗುಂಪಿನಿಂದ ಕೃಷ್ಣಪ್ಪ ಮೇಲೆ ಕಟ್ಟಿಗೆಯಿಂದ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡು ಕೃಷ್ಣಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೃತ ಕೃಷ್ಣಪ್ಪ ಸಂಬಂಧಿ ಗೆಲುವು ಸಾಧಿಸಿದ್ದರು. ಸೋಲು ಕಂಡವರು ಇಂದು ಉದ್ದೇಶ ಪೂರ್ವಕವಾಗಿ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ.
ಕೃಷ್ಣಪ್ಪ ಶವವನ್ನು ಮರಣೋತ್ತರ ಪರೀಕ್ಷೆಗೆ ಜಗಳೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ, ಮೃತದೇಹವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಜಗಳೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ