ಮೈಸೂರಿನಲ್ಲಿ ಆ. 24 ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಆರೋಪಿಗಳ ವೈದ್ಯಕೀಯ ತಪಾಸಣೆ ಇಂದು ಅಜ್ಞಾತ ಸ್ಥಳದಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ತಜ್ಞರ ತಂಡ ಮೈಸೂರಿಗೆ ಬಂದಿದೆ.
ಈ ಮಧ್ಯೆ ಘಟನೆ ನಡೆದ ನಂತರ ಸಂತ್ರಸ್ತೆ ದಾಖಲಾಗಿದ್ದ ಆಸ್ಪತ್ರೆಯಿಂದ ಸಂತ್ರಸ್ತೆ ಡಿಎನ್‌ಎ ಸ್ಯಾಂಪಲ್ ಅನ್ನು ಸಂಗ್ರಹಿಸಲಾಗಿದೆ ಎಂದು ವರದಿಗಳು ಹೇಳಿವೆ.
ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ಸ್ಯಾಂಪಲ್ ಸಂಗ್ರಹಿಸಲಾಗುತ್ತದೆ. ಆದರೆ ಈ ಸಾಮೂಹಿಕ ಅತ್ಯಾಚಾರ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಖಾಸಗಿ ಆಸ್ಪತ್ರೆಯಿಂದ ಡಿಎನ್‌ಎ ಸಂಗ್ರಹಿಸಲಾಗಿದೆ ಎಂದು ತಿಳಿಸಿವೆ.
ಮೈಸೂರಿನಿಂದ ಪೋಷಕರೊಂದಿಗೆ ಮುಂಬೈಗೆ ತೆರಳಿರುವ ಸಂತ್ರಸ್ತೆ ಇನ್ನೂ ಪೊಲೀಸರಿಗೆ ಹೇಳಿಕೆ ನೀಡಲು ಮುಂದೆ ಬಂದಿಲ್ಲ ಎಂದು ಮೂಲಗಳು ಹೇಳಿವೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ