ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಅನ್ನು GST ವ್ಯಾಪ್ತಿಗೆ ಒಳಪಡಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್‌ನಲ್ಲಿ ಬಜೆಟ್ ಪ್ರಸ್ತಾವನೆಯಾಗಲಿದ್ದು, ಈ ಸಂದರ್ಭದಲ್ಲಿ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ತರಲು ಸಾಧ್ಯತೆಯನ್ನು ಪರಿಶೀಲಿಸಲಾಗುವುದು ಎಂದರು.
ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ತರುತ್ತಿದ್ದರೆ ಲಾಭವಾಗುತ್ತದೆಯಾ ಅಥವಾ ರಾಜ್ಯಗಳಿಗೆ ತೊಂದರೆ ಉಂಟಾಗುತ್ತದೆಯೇ ಎಂಬುದರ ಬಗ್ಗೆ ಕೇಂದ್ರದ ಸಹಕಾರ ಅವಶ್ಯಕ ಎಂದು ಅವರು ಅಭಿಪ್ರಾಯಪಟ್ಟರು.
“ಕೇಂದ್ರ ಸರ್ಕಾರದಿಂದ ಬೆಂಬಲ ದೊರೆತರೆ, ರಾಜ್ಯದಲ್ಲಿ ಪೆಟ್ರೋಲ್ ಅನ್ನು ಜಿಎಸ್‌ಟಿಗೆ ಒಳಪಡಿಸಲು ಕ್ರಮ ಕೈಗೊಳ್ಳಬಹುದು. ಆದರೆ, ಇದರಿಂದ ರಾಜ್ಯಕ್ಕೆ ತೊಂದರೆ ಉಂಟಾಗುತ್ತದೆ ಎಂಬುದಾಗಿ ಕಂಡುಬಂದರೆ, ಅದು ನಿಂತು ಚರ್ಚೆ ಮಾಡಬೇಕಾಗುತ್ತದೆ,” ಎಂದು ಡಾ. ಪರಮೇಶ್ವರ್ ಹೇಳಿದ್ದಾರೆ.ಇದನ್ನು ಓದಿ –ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
ಪೆಟ್ರೋಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ತೆಗೆದುಕೊಳ್ಳುವ ತೀರ್ಮಾನವು ರಾಜ್ಯಕ್ಕೆ ಹಾಗೂ ನಾಗರಿಕರಿಗೆ ಲಾಭಕರವಾಗಲು ಸೂಕ್ತ ಕ್ರಮಗಳು ಬೇಕಾದ್ದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ