ತಮಿಳುನಾಡಿನ ಶಶಿಕಲಾ ನಟರಾಜನ್ ಅವರಿಗೆ ಬುಧವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದೊಡ್ಡ ಆಘಾತ ನೀಡಿದ್ದಾರೆ.
ಶಶಿಕಲಾ ನಿವಾಸದ ಮೇಲೆ ದಾಳಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು ಬರೋಬ್ಬರಿ 2,000 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ಈಗ ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಶಶಿಕಲಾ ಅವರ ಸಹವರ್ತಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಸಿರುಥಾವೂರ್ ಹಾಗೂ ಕೊಡನಾಡುವಿನ 65 ಆಸ್ತಿಗಳನ್ನು ಜಪ್ತಿ ಮಾಡಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆಯಾಗಿರುವ ಶಶಿಕಲಾ ಈ ಹಿಂದೆ ಆದಾಯ ತೆರಿಗೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಹಲವು ವರ್ಷಗಳಿಂದ ಶಿಕ್ಷೆ ಅನುಭಿಸುತ್ತಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು