December 22, 2024

Newsnap Kannada

The World at your finger tips!

dinesh Gundurao

ಕೋವಿಡ್ ಹೆಚ್ಚಳ :60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

Spread the love

ಮಡಿಕೇರಿ : ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ ಇಂದಿನಿಂದಲೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಕುಶಾಲನಗರದಲ್ಲಿ ಮಾತಾನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ನಡೆಸಿದ್ಧು , ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ.

60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು .

ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗುವಂತೆ ಸೂಚನೆ ನೀಡಲಾಗಿದೆ.

ಉಸಿರಾಟದ ತೊಂದರೆ, ಇತರ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ ಮತ್ತು ಗಡಿ ಭಾಗದಲ್ಲಿ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಲಾಗುವುದು ಎಂದು ತಿಳಿಸಿದರು.

ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ ಮತ್ತು ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

ಅದರ ತೀವ್ರತೆ 2-3 ದಿನಗಳಲ್ಲಿ ಗೋತ್ತಾಗಲಿದೆ . ಸದ್ಯಕ್ಕೆ ಗುಂಪಿನಲ್ಲಿ ಓಡಾಟ ಮಾಡುವ ಹಾಗಿಲ್ಲ ಮತ್ತು ಜನ ಸೇರುವ ಹಾಗಿಲ್ಲ .ಸರ್ಕಾರದಿಂದ 3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೋಳಿಸಲು ಸೂಚನೆ

ರಾಜ್ಯದಲ್ಲಿ ಸದ್ಯಕ್ಕೆ ಸಹಜ ಸ್ಥಿತಿಯಲ್ಲಿ ಇದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!