ಬೆಂಗಳೂರು, ಜನವರಿ 31: ಕರ್ನಾಟಕ ಸರ್ಕಾರದಿಂದ ಹೊಸ ವರ್ಷಕ್ಕೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಸಂಭ್ರಮದ ಸುದ್ದಿ ನೀಡಲಾಗಿದೆ. ರಾಜ್ಯದ ಆರ್ಥಿಕ ಇಲಾಖೆಯಿಂದ ಗೌರವಧನ ಹೆಚ್ಚಳಕ್ಕೆ ಅನುಮೋದನೆ ಸಿಕ್ಕಿದ್ದು, ಈ ನಿರ್ಧಾರ ಅತಿಥಿ ಶಿಕ್ಷಕರಿಗೆ ಬಹುದೊಡ್ಡ ಸಹಾಯವಾಗಲಿದೆ.
ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನವನ್ನು ರೂ.10,500 ರಿಂದ ರೂ.16,650 ಗೆ ಹೆಚ್ಚಿಸಲಾಗಿದೆ. ಇದರಲ್ಲಿ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3,000 ಸೇರಿಸಲಾಗಿದೆ.
ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ: ಪ್ರಸ್ತುತ ರೂ.12,000 ಗೌರವಧನ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಈಗ ಒಟ್ಟು ರೂ.18,150 ಆಗಿದ್ದು, ಇದರಲ್ಲಿ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಮತ್ತು ಪ್ರಯಾಣ ಭತ್ಯೆ ರೂ.3,000 ಸೇರಿಸಲಾಗಿದೆ. ಈ ಬಗ್ಗೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಮಹಾ ಕುಂಭಮೇಳದಲ್ಲಿ ಮತ್ತೊಂದು ಕಾಲ್ತುಳಿತ: 7 ಜನ ದುರ್ಮರಣ
ಸಚಿವ ಸಂಪುಟದ ಪ್ರಮುಖ ನಿರ್ಧಾರಗಳು:
ಪೊಲೀಸ್ ಇಲಾಖೆ: ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟು ಮೀಸಲಾತಿ ಶೇ.2 ರಿಂದ ಶೇ.3 ಗೆ ಹೆಚ್ಚಳ.
ಪಿಪಿಪಿ ಯೋಜನೆಗಳು: ಮೂಲಸೌಲಭ್ಯ ವಲಯದ 2025ನೇ ಸಾಲಿನ ಪಿಪಿಪಿ ಯೋಜನೆಗಳ ನೀತಿ ಅನುಮೋದನೆ.
ರಸ್ತೆ ನಿರ್ಮಾಣ: ಹಾಸನ-ಹೊಳೆನರಸೀಪುರ ರೈಲು ಮಾರ್ಗದ 83.72 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ.
ಸೇತುವೆ ನಿರ್ಮಾಣ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ 44.50 ಕೋಟಿ ರೂ. ವೆಚ್ಚದಲ್ಲಿ ಸೇತುವೆ.
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ: ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲ ಭಾಗಗಳಲ್ಲಿ ಸ್ಯಾಟಿಲೈಟ್ ಟೌನ್ ಅಭಿವೃದ್ಧಿಗೆ ಒಪ್ಪಿಗೆ.
More Stories
ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
ಆಧಾರ್ ದೃಢೀಕರಣಕ್ಕೆ ಖಾಸಗಿ ಕಂಪನಿಗಳಿಗೆ ಅನುಮತಿ