ಶಾಲೆ, ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದೆ. ಸರ್ಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15 ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು
ಚನ್ನಪಟ್ಟಣದ ಹೊಂಗನೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿಕೆ , ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್ ಮಾಡಿಸಬೇಕು ಎಂದರು.
ತಜ್ಞರ ವರದಿಗಿಂತ ಸರ್ಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರ್ಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಸಲಹೆ ಮಾಡಿದರು.
ತಜ್ಞರಲ್ಲಿ ಕೆಲವರು ಶಾಲೆಗಳನ್ನು ತೆರೆಯುವಂತೆ ಘೋಷಿಸುವುದಕ್ಕೆ ಪರ-ವಿರೋಧ ಇದೆ . ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರ್ಕಾರದ ಮುಂದೆ ಕೋವಿಡ್ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದು ವಿವರಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು