5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 4 ನೇ ಅಲೆಯ ಮುನ್ಸೂಚನೆ – ಎಚ್ಚರಿಕೆಯ ಸೂಚನೆ

Team Newsnap
1 Min Read

ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ತೀವ್ರ ಹೆಚ್ಚಳವಾಗಿ ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ. ಈ ಬೆನ್ನಲ್ಲೇ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿ ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದಂತಾಗಿದೆ. ‌

ಚೀನಾ, ಅಮೆರಿಕ ಮತ್ತು ಯೂರೋಪ್‌ನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ.

ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಓಮೈಕ್ರಾನ್‌ನ ಉಪ ತಳಿಯಾದ XE ತಳಿಯೂ ಸಹ ಭಾರತದಲ್ಲಿ 2 ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ದೇಶದ ಕೇರಳ, ಹರಿಯಾಣ, ಮಹಾರಾಷ್ಟ್ರ ದೆಹಲಿ ಹಾಗೂ ಮಿಜೋರಾಂಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಿ ಪತ್ರ ಬರೆದಿದೆ.

ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ವಹಿಸಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ನಿಯಂತ್ರಣಾ ಕ್ರಮ ಕೈಗೊಳ್ಳಬೇಕು ಎಂದೂ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a comment