ಎನ್‌ಹೆಚ್ ಅಧಿಕಾರಿಗಳು ಹಾಗೂ ಡಿಬಿಎಲ್ ಸಂಸ್ಥೆಯ ಎಂಜಿನಿಯರ್ ಜೊತೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ಅಲೋಕ್ ಕುಮಾರ್ ಇದೇ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು.
ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ ಸಿಬ್ಬಂದಿ ಕಂಡರೆ ವಾಹನ ಸವಾರರಿಗೆ ಒಂದು ಭಯ ಇರುತ್ತದೆ. ಬೆಂಗಳೂರಿನಿಂದ ಬೆಳಗಾವಿಯವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದು ತಿಳಿಹೇಳಿದರು.
ಈ ಹಿಂದೆ ನಾನು ದಾವಣಗೆರೆಯಲ್ಲಿ ಎಸ್‌ಪಿ ಆಗಿದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಸಿ ಶೇ 40 ರಷ್ಟು ಅಪಘಾತ ತಗ್ಗಿಸಿದ್ದೆವು. ಈ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು.
ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು.ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು : ಪ್ರಧಾನಿಯಿಂದ ಇಂದು ಉದ್ಘಾಟನೆ – ದರ ಎಷ್ಟು ಗೊತ್ತಾ?
ಈ ವೇಳೆ ಎಡಿಜಿಪಿಗೆ, ಐಜಿಪಿ ಡಾ.ಬಿಆರ್ ರವಿಕಾಂತೇಗೌಡ, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್ ಜೊತೆಯಲ್ಲಿದ್ದರು.
More Stories
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನ್ಯಾಕ್ ಗ್ರೇಡ್ ಲಂಚ ಪ್ರಕರಣ: ವಿವಿ ಪ್ರಾಧ್ಯಾಪಕಿ ಸೇರಿದಂತೆ 10 ಮಂದಿ CBI ವಶಕ್ಕೆ