ಬೆಂ- ಮೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಿ – ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

Team Newsnap
1 Min Read
Increase patrolling on Bng-Mys Highway - ADGP Alok Kumarಬೆಂ- ಮೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಿ - ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳವಾರ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೆದ್ದಾರಿ ಪರಿಶೀಲನೆ ನಡೆಸಿದರು.

ಎನ್‌ಹೆಚ್ ಅಧಿಕಾರಿಗಳು ಹಾಗೂ ಡಿಬಿಎಲ್ ಸಂಸ್ಥೆಯ ಎಂಜಿನಿಯರ್ ಜೊತೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ಅಲೋಕ್ ಕುಮಾರ್ ಇದೇ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು.

ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ ಸಿಬ್ಬಂದಿ ಕಂಡರೆ ವಾಹನ ಸವಾರರಿಗೆ ಒಂದು ಭಯ ಇರುತ್ತದೆ. ಬೆಂಗಳೂರಿನಿಂದ ಬೆಳಗಾವಿಯವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದು ತಿಳಿಹೇಳಿದರು.

ಈ ಹಿಂದೆ ನಾನು ದಾವಣಗೆರೆಯಲ್ಲಿ ಎಸ್‌ಪಿ ಆಗಿದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಸಿ ಶೇ 40 ರಷ್ಟು ಅಪಘಾತ ತಗ್ಗಿಸಿದ್ದೆವು. ಈ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು.

ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು.ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು : ಪ್ರಧಾನಿಯಿಂದ ಇಂದು ಉದ್ಘಾಟನೆ – ದರ ಎಷ್ಟು ಗೊತ್ತಾ?

ಈ ವೇಳೆ ಎಡಿಜಿಪಿಗೆ, ಐಜಿಪಿ ಡಾ.ಬಿಆರ್ ರವಿಕಾಂತೇಗೌಡ, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್ ಜೊತೆಯಲ್ಲಿದ್ದರು.

Share This Article
Leave a comment