ಅವಧಿಗೂ ಮುನ್ನವೇ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಳ – ಮಾಜಿ ಸಿಎಂ ಹೆಚ್‍ಡಿಕೆ

Team Newsnap
1 Min Read

ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಹೆಚ್ಚಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಕೆ ಅವರು, ಚುನಾವಣೆಗಾಗಿ ಜೆಡಿಎಸ್ ಸಿದ್ಧವಾಗುತ್ತಿದೆ. ಜೊತೆಗೆ ನಾನು ಯಾವತ್ತೂ ಬಿಜೆಪಿಗೆ ಮೃದು ಧೋರಣೆ ತೋರಿಸಿಲ್ಲ. ಹಾಗೆ ಮೃದು ಧೋರಣೆ ಇದ್ದಿದ್ದರೆ, ನಾನು ಈ ರೀತಿ ಮಾತಾಡುತ್ತಿರಲಿಲ್ಲ ಎಂದು ಹೇಳಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಬೇಕಾದಾಗ ಬಳಸಿಕೊಂಡಿವೆ. ನೀರಾವರಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದ ಜನರಿಗೆ ಮೂರು ನಾಮ ಎಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಎರಡು ಪಕ್ಷಗಳು ದ್ರೋಹ ಮಾಡುತ್ತಿವೆ ಎಂದು ಕಿಡಿಕಾರಿದರು.

ಸಿಎಂ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿ ಅನುಭವ ಹೊಂದಿದವರು. ಬಜೆಟ್‍ನಲ್ಲಿ ನೀರಾವರಿ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ರಾಜ್ಯದ ಜನರಿಗೆ ಸಿಎಂ ದ್ರೋಹ ಮಾಡಿದ್ದಾರೆ ಎಂದರು.

ಕೇಂದ್ರ ನೀರಾವರಿ ಸಚಿವರು ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ್ದೇನೆ, ಎರಡು ರಾಜ್ಯ ಒಪ್ಪಿದ್ರೆ ಮಾತುಕತೆ ಮಾಡೋದಾಗಿ ಹೇಳ್ತಾರೆ. ಅದೇ ರೀತಿ ಕಾಂಗ್ರೆಸ್‍ನವರು ನಮ್ಮ ಪಾದಯಾತ್ರೆ ನೋಡಿ ಸಾವಿರ ಕೋಟಿ ನೀಡಿದ್ದಾರೆ ಎಂದು ಹೇಳುತ್ತಾರೆ. ಎರಡು ಪಕ್ಷಕ್ಕೆ ಮೇಕೆದಾಟು ಯೋಜನೆ ಪ್ರಾರಂಭ ಮಾಡುವ ಯೋಗ್ಯತೆ ಇಲ್ಲಾ ಎಂದು ವಾಗ್ದಾಳಿ ನಡೆಸಿದರು.

Share This Article
Leave a comment