January 14, 2026

Newsnap Kannada

The World at your finger tips!

yasaswi jaiswal

Ind vs Eng : ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ

Spread the love

ವಿಶಾಖಪಟ್ಟಣ : Ind vs Eng ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಯಶಸ್ವಿ ಜೈಸ್ವಾಲ್ 151 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕದೊಂದಿಗೆ ಟೀಂ ಇಂಡಿಯಾ, ಮೊದಲ ದಿನದಾಟದಲ್ಲೇ ಬೃಹತ್ ಮೊತ್ತದತ್ತ ತಲುಪಿದ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು.

ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 17.3 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿದರು.

41 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿದ ನಾಯಕ ರೋಹಿತ್ ಶರ್ಮಾ , ಶೋಯೆಬ್ ಬಷೀರ್‌ ಬೌಲಿಂಗ್‌ನಲ್ಲಿ ಓಲಿ ಪೋಪ್‌ಗೆ ವಿಕೆಟ್ ಒಪ್ಪಿಸಿದರು.

ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ :

ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಜೊತೆಯಾಗಿ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.

ಜೈಸ್ವಾಲ್ ಮೊದಲ ದಿನದಿಂದಲೇ ತಿರುವು ಪಡೆಯುವ ಮುನ್ಸೂಚನೆ ನೀಡುತ್ತಿರುವ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಪ್ರತಿಭೆ ಅನಾವರಣ ಮಾಡಿ , ಟೆಸ್ಟ್ ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು.

ಜೈಸ್ವಾಲ್ ಕೇವಲ 151 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಮುಗಿಲೆತ್ತರದ ಸಿಕ್ಸರ್ ನೆರವಿನಿಂದ ಮೂರಂಕಿ ಮೊತ್ತ ದಾಖಲಿಸಲು ಯಶಸ್ವಿಯಾದರು.ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ – ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು

ಟೀಂ ಇಂಡಿಯಾ 50 ಓವರ್ ಅಂತ್ಯದ ವೇಳೆಗೆ ಕೇವಲ 2 ವಿಕೆಟ್ ಕಳೆದುಕೊಂಡು 175 ರನ್ ಬಾರಿಸಿದ್ದು, ಜೈಸ್ವಾಲ್ 104 ಹಾಗೂ ಶ್ರೇಯಸ್ ಅಯ್ಯರ್ 23 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

error: Content is protected !!