ಚೀನಾ ಒಲಿಂಪಿಕ್ಸ್‌ಗೆ ಭಾರತ ಬಹಿಷ್ಕಾರ –ಭಾರತೀಯ ವಿದೇಶಾಂಗ ಇಲಾಖೆ ನಿರ್ಧಾರ

Team Newsnap
0 Min Read

ಚೀನಾದಲ್ಲಿ ನಡೆಯಲಿರುವ ಬೀಜಿಂಗ್ ಒಲಿಂಪಿಕ್ಸ್‌ನ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಭಾರತ ಪ್ರಕಟಿಸಿದೆ.

ಗಲ್ವಾನ್ ಘರ್ಷಣೆಯಲ್ಲಿ ಬಾಗಿಯಾಗಿದ್ದ ಚೀನಾ ಸೇನೆಯ ಅಧಿಕಾರಿಯೊಬ್ಬರು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ ಸಾಂಪ್ರದಾಯಿಕ ಜ್ಯೋತಿ ಹಿಡಿದ ಬೆನ್ನಲ್ಲೇ ಭಾರತ ಒಲಿಂಪಿಕ್ಸ್‌ಗೆ ಬಹಿಷ್ಕಾರ ಹಾಕಿದೆ.

ಈ ಬಗ್ಗೆ ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಅಸಮಾಧಾನ ಹೊರಹಾಕಿದ್ದಾರೆ.

ಕ್ರೀಡೆಯಲ್ಲಿ ಚೀನಾ ರಾಜಕಾರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತ ರಾಜತಾಂತ್ರಿಕ ಬಹಿಷ್ಕಾರಕ್ಕೆ ಮುಂದಾಗಿದೆ.

ಬೀಜಿಂಗ್‍ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಭಾರತೀಯರು ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಕ್ಕೆ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

Share This Article
Leave a comment