ಭಾರತ ಚಂದ್ರನ ಮೇಲಿದೆ : ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಸಂತಸ

Team Newsnap
1 Min Read

ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ದಕ್ಷಿಣ ಆಫ್ರಿಕಾದಿಂದಲೇ ವರ್ಜುವಲ್ ಮೂಲಕ ಸಾಕ್ಷಿಯಾದ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳನ್ನ ಶ್ಲಾಘಿಸಿದರು.

ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರಧಾನಿ ಮೋದಿ ಸಂಭ್ರಮ ಹಂಚಿಕೊಂಡರು.

ಪ್ರಧಾನಿ ಮೋದಿ, “ಐಸಿಹಾಸಿಕ ಕ್ಷಣಕ್ಕೆ ನಾವೇಲ್ಲಾ ಸಾಕ್ಷಿಯಾಗಿದ್ದೇವೆ, ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಈ ಸುಸಂದರ್ಭದಲ್ಲಿ ನಾನು ಭಾರತದ 140 ಕೋಟಿ ಜನರಿಗೆ ಆಭಿನಂದನೆ ಸಲ್ಲಿಸುತ್ತೇನೆ. ಈಗ ಭಾರತ ಚಂದ್ರನ ಮೇಲಿದೆ. ಇಂದಿನಿಂದ ಚಂದ್ರನ ಬಗೆಗಿನ ಕಥೆಗಳು ಬದಲಾಗುತ್ತವೆ” ಎಂದರು.

ಈ ವೇಳೆ ಮಾತನಾಡಿದ ಪ್ರಧಾನಿ, ನಾನು ದಕ್ಷಿಣ ಆಫ್ರಿಕಾದಲ್ಲಿದ್ದೇನೆ. ಆದರೆ ನನ್ನ ಮನಸ್ಸು ಚಂದ್ರಯಾನ ಮೇಲಿತ್ತು. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಇಂತಹ ಐತಿಹಾಸಿಕ ಕ್ಷಣಗಳನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ. ಈ ಹಿಂದೆ ಯಾವುದೇ ದೇಶವು ಚಂದ್ರನ ದಕ್ಷಿಣ ಧ್ರುವ ತಲುಪಿಲ್ಲ. ನಮ್ಮ ವಿಜ್ಞಾನಿಗಳ ಕಠಿಣ ಪರಿಶ್ರಮದಿಂದ ನಾವು ತಲುಪಿದ್ದೇವೆ ಎಂದು ಸಂತಸ ಹಂಚಿಕೊಂಡರು.

Share This Article
Leave a comment