Trending

ಭಾರತ ಇಸ್ಲಾಮಿಕ್ ರಾಷ್ಟ್ರದ ಗುರಿ: ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ – ಐಸಿಸ್‌ ಶಂಕಿತ ಉಗ್ರರ ಒಳ ಸಂಚು

ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿದೆ ನಿಜ ಆದರೆ ನಮಗೆ ಸ್ವತಂತ್ರ ಸಿಕ್ಕಿಲ್ಲ. ನಮಗೆ ಸಂಪೂರ್ಣ ಸ್ವಾತಂತ್ರ್ಯ ಸಿಗಬೇಕಾದರೆ ಭಾರತ ಇಸ್ಲಾಮಿಕ್ ರಾಷ್ಟ್ರ ಆಗಬೇಕು. ಈ ಕಾರಣಕ್ಕೆ ಜಿಹಾದ್‌ ದಾಳಿಗೆ ಬಾಂಬ್‌ ತಯಾರಿಸಲು ಮುಂದಾಗಿದ್ದೇವೆ ಎಂದು ಇಬ್ಬರು ಶಂಕಿತ ಉಗ್ರರು ಆತಂಕಕಾರಿ ಸಂಗತಿಯನ್ನು ಶಿವಮೊಗ್ಗ ಪೊಲೀಸರ ಮುಂದೆ ಹೊರ ಹಾಕಿದ್ದಾರೆ

ಶಂಕಿತ ಉಗ್ರರಾದ ಮಾಝ್ ಮುನೀರ್ ಅಹಮದ್ ಹಾಗೂ ಸೈಯದ್ ಯಾಸೀನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.ಸೆ.28ಕ್ಕೆ ಸಚಿವ ಸಂಪುಟ ವಿಸ್ತರಣೆ : ಜಾರಕಿಹೊಳಿ, ಈಶ್ವರಪ್ಪ, ಸವದಿ, CPY ಮೇಲೆ ಸಿಎಂಗೆ ಒಲವು

ಇಬ್ಬರು ಐಸಿಸ್‌ ವಿಡಿಯೋಗಳಿಂದ ಪ್ರೇರಿತರಾಗಿ ಭಾರತದಲ್ಲೂ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದ್ದರು. ಮೊಬೈಲ್‌, ವಾಟ್ಸಪ್‌ ಮೂಲಕ ಸಂವಹನ ನಡೆಸದೇ ಟೆಲಿಗ್ರಾಮ್‌, ಸಿಗ್ನಲ್‌ ಇತ್ಯಾದಿ ಮೆಸೆಂಜರ್‌ ಆಪ್‌ ಬಳಸುತ್ತಿದ್ದ ವಿಚಾರ ತನಿಖೆಯಿಂದ ತಿಳಿದು ಬಂದಿದೆ.

ಶಿವಮೊಗ್ಗದ ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್‌(21) ಜೆಎನ್‌ಎನ್‌ಸಿ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಓದಿದ್ದು ಎರಡು ತಿಂಗಳ ಹಿಂದೆ ವ್ಯಾಸಂಗ ಮುಗಿಸಿದ್ದ.

ಮಾಜ್‌ ಮುನೀರ್‌(22) ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದಾನೆ. ತೀರ್ಥಹಳ್ಳಿ ಮೂಲದ ಶಾರೀಕ್‌ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ವಿವರಣೆ ನೀಡಿದರು

ಆಗಸ್ಟ್ 15ರಂದು ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಅಮೀರ್ ಅಹಮದ್ ವೃತ್ತದಲ್ಲಿ ಘರ್ಷಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ಬಟ್ಟೆ ಅಂಗಡಿ ನೌಕರ ಪ್ರೇಮ್‌ಸಿಂಗ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬೀಯುಲ್ಲಾನ ಬಂಧನವಾಗುತ್ತದೆ.

ಆತನ ವಿಚಾರಣೆ ಮತ್ತು ಮೊಬೈಲ್‌ ದಾಖಲೆ ಪರಿಶೀಲನೆಯ ವೇಳೆ ಆತ ಹಲವರ ಜೊತೆ ಸಂವಹನ ನಡೆಸಿದ ವಿಚಾರ ತಿಳಿದು ಬರುತ್ತದೆ. ಈ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದರು.

Team Newsnap
Leave a Comment

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024