ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ.
ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯ್ಕೆ ಸಮಿತಿ ಸಭೆ ಸೇರಿ , 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಲಿದ್ದು , ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆ.ಎಲ್ ರಾಹುಲ್ ಅವ್ರನ್ನ ತಂಡದಿಂದ ಕೈಬಿಡಲಾಗಿದೆ.
ಟಿ20 ವಿಶ್ವಕಪ್‍ಗೆ ಭಾರತ ತಂಡ ಇಂತಿದೆ :
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯಶಸ್ವಿ ಜೈಶ್ವಾಲ್, ವಿರಾಟ್ ಕೊಹ್ಲಿ, ಎಸ್.ದುಬೆ, ರವಿಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅರ್ಷ್‍ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಸಿರಜ್, ವಿಕೆಟ್ ಕಿಪರ್‍ಗಳಾಗಿ ರಿಷಬ್ ಪಂತ್, ಎಸ್.ಸ್ಯಾಮ್ಸನ್ ಇರಲಿದ್ದಾರೆ.
ಮೀಸಲು ಆಟಗಾರು:
ಶುಭಮನ್ ಗಿಲ್, ಖಲೀಲ್ ಅಹ್ಮದ್, ರಿಂಕು ಸಿಂಗ್, ಅವೇಶ್ ಖಾನ್
ಜೂನ್ 1 ರಿಂದ ವಿಶ್ವಕಪ್ ಕ್ರಿಕೆಟ್ ಪಂದ್ಯಗಳು ಪ್ರಾರಂಭವಾಗಲಿದ್ದು ಅಮೆರಿಕ ಮತ್ತು ವೆಸ್ಟ್ ಇಂಡೀಸ್‍ನಲ್ಲಿ ನಡೆಯಲಿದೆ.
ಅಮೆರಿಕದ ಅಂಗಳದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ನಡೆಯಲಿದೆ.ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು
ಐಸಿಸಿ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದ್ದು , ಭಾರತ ಹಾಗೂ ಪಾಕಿಸ್ತಾನದ ನಡುವೆ ಜೂನ್ 9 ರಂದು ಪಂದ್ಯ ನಡೆಯಲಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ