December 23, 2024

Newsnap Kannada

The World at your finger tips!

ravat

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇನ್ನಿಲ್ಲ

Spread the love

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾದ ನಂತರ ಬಿಪಿನ್ ರಾವತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ

ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕೊಯಮತ್ತೂರು, ಕೂನೂರು ನಡುವಿನ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ದೊಡ್ಡ ಸ್ಫೋಟದ ಶಬ್ಧದೊಂದಿಗೆ ಹೆಲಿಕಾಪ್ಟರ್ ಪತನವಾಗಿದೆ. ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಬಿಪಿನ್ ರಾವತ್ ಸೇರಿ 14 ಮಂದಿ ಪಯಣಿಸುತ್ತಿದ್ದರು.

ಈ ದುರಂತದಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ 11 ಮಂದಿ ಬಲಿ ಆಗಿದ್ದಾರೆ.
2015ರಲ್ಲಿ ಸಂಭವಿಸಿದ ನಾಗಾಲ್ಯಾಂಡ್‍ನ ದೀಮಾಪುರ್ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸ್ವಲ್ಪದ್ರಲ್ಲೇ ಪ್ರಾಣಾಪಾಯದಿಂದ ಬಿಪಿನ್ ರಾವತ್ ಪಾರಾಗಿದ್ದರು. ಆಗ ಬಿಪಿನ್ ರಾವತ್ ಲೆಫ್ಟಿನೆಂಟ್ ಜನರಲ್ ಆಗಿದ್ದರು.

ದಿಮಾಪುರದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು. ಎಂಜಿನ್ ವೈಫಲ್ಯದಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೈಲಟ್‍ಗಳು ಮತ್ತು ಕರ್ನಲ್ ಕೂಡ ಬದುಕುಳಿದಿದ್ದರು. ಆದರೆ ಇವತ್ತು ಸಂಭವಿಸಿದ ದುರಂತದಲ್ಲಿ ಬಿಪಿನ್ ರಾವತ್ ಸಾವನ್ನಪ್ಪಿದ್ದಾರೆ.

ಬಿಪಿನ್ ರಾವತ್ ಯಾರು?:

ಬಿಪಿನ್ ರಾವತ್ ಉತ್ತರಾಖಂಡನ್‍ನ ಪೌರಿಯಲ್ಲಿ 1958ರಲ್ಲಿ ಜನಿಸಿದ್ದರು. ತಂದೆ ಲಕ್ಷ್ಮಣ್ ಸಿಂಗ್, ನಿವೃತ್ತ ಲೆಫ್ಟಿನೆಂಟ್ ಜನೆರಲ್ ಆಗಿ ಸೇವೆಸಲ್ಲಿಸಿದ್ದಾರೆ. ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (2020ರ ಜನವರಿ1 ) ಭಾರತೀಯ ಸೇನೆಯ ಟಾಪ್ ಮೋಸ್ಟ್, 4 ಸ್ಟಾರ್ ಸೈನ್ಯಾಧಿಕಾರಿ, ಲಡಾಖ್ ಬಿಕ್ಕಟ್ಟಿನ ವೇಳೆ ಚೀನಾ ವಿರುದ್ಧ ವ್ಯೂಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಾರತ ರಕ್ಷಣಾ ರಂಗದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದವರು. ತ್ರಿವಿಧ ದಳಗಳ 17 ಕಮಾಂಡ್‍ಗಳನ್ನು ಸೇರಿಸುವ ಗುರುತರ ಹೊಣೆ ಹೊತ್ತಿದ್ದರು. (ಇಂಟಿಗ್ರೇಟೆಡ್ ಥೇಟರ್ ಕಮಾಂಡ್). ತ್ರ್ರಿವಿಧ ದಳಗಳು ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕೆಲಸ ಮಾಡಿದ್ದರು.

1987ರಲ್ಲಿ ಸಮ್‍ದೊರಂಗ್ ಚು ಕಣಿವೆಯಲ್ಲಿ ಚೀನಾ ಎದುರಿಸಿದ್ದ ರಾವತ್ ನೇತೃತ್ವದ ಪಡೆ, 2015ರಲ್ಲಿ ಮಯನ್ಮಾರ್ ಗಡಿಗೆ ನುಗ್ಗಿ ರಾವತ್ ನೇತೃತ್ವದ 3 ಕಾಪ್ರ್ಸ್ ಕಾರ್ಯಾಚರಣೆ ನಡೆಸಿದ್ದರು. ಬಿಪಿನ್ ಪತ್ನಿ ಮಧುಲಿಕಾ ಸೈನಿಕರ ಮಕ್ಕಳ ಅಭಿವೃದ್ಧಿಗಾಗಿ, ಸೈನಿಕರ ಶ್ರೇಯೋಭಿವೃದ್ಧಿಗಾಗಿ ಎಡಬ್ಲ್ಯೂಡಬ್ಲ್ಯೂಎ ಎನ್ನುವ ಸರ್ಕಾರೇತರ ಸಂಸ್ಥೆ ನಡೆಸ್ತಿದ್ರು. ಈ ಮೂಲಕ ಯೋಧರ ಕುಟುಂಬಗಳಿಗೆ ಮಧುಲಿಕಾ ನೆರವಿನ ಹಸ್ತ ಚಾಚಿದ್ದರು. ಯೋಧರ ಪತ್ನಿಯರಿಗೆ ಸ್ವಯಂ ಉದ್ಯೋಗದ ತರಭೇತಿ ನೀಡುತ್ತಿದ್ದರು.

Copyright © All rights reserved Newsnap | Newsever by AF themes.
error: Content is protected !!