December 20, 2024

Newsnap Kannada

The World at your finger tips!

kapil dev

Image Source: google / Picture by : zeenews.india.com

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ !

Spread the love

ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದು ಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳ ಗಾಗಿ ಇಲ್ಲಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. 

61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನ ನೀಡಲಾಗಿದೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಕಪಿಲ್‌ ದೇವ್‌ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕರ್ ತಮ್ಮ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.

ಜನವರಿ 6, 1959ರಲ್ಲಿ ಚಂಡೀಘಡದಲ್ಲಿ ಜನಿಸಿದ ಕಪಿಲ್ ದೇವ್, 1983ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ನಾಯಕನಾಗಿ ಪ್ರಮುಖ ಪಾತ್ರವಹಿಸಿದ್ದರು. ಕಪಿಲ್ ದೇವ್ ತಮ್ಮ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಭಾರತಕ್ಕೆ ಏಕಾಂಗಿಯಾಗಿ ಹಲವಾರು ಸ್ಮರಣೀಯ ಗೆಲುವುಗಳನ್ನು ತಂದಿಟ್ಟಿದ್ದಾರೆ.

131 ಟೆಸ್ಟ್ ಪಂದ್ಯಗಳನ್ನಾಡಿದ್ದ ಕಪಿಲ್ ದೇವ್ 8 ಶತಕ ಹಾಗೂ 27 ಅರ್ಧಶತಕಗಳ ನೆರವಿನಿಂದ 5248 ರನ್ ಬಾರಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲೂ 434 ವಿಕೆಟ್ ಕಬಳಿಸಿದ್ದಾರೆ. ಇನ್ನು 225 ಏಕದಿನ ಪಂದ್ಯಗಳನ್ನಾಡಿರುವ ಕಪಿಲ್, 1 ಶತಕ ಹಾಗೂ 14 ಅರ್ಧಶತಕಗಳ ಸಹಿತ 3,783 ರನ್ ಬಾರಿಸಿದ್ದಾರೆ. ಬೌಲಿಂಗ್’ನಲ್ಲಿ 253 ವಿಕೆಟ್ ಪಡೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!